ಆ.23, 24 ರಾಜ್ಯ ಮಟ್ಟದ ವಿಚಾರ ಸಂಕಿರಣ
ಮೈಸೂರು

ಆ.23, 24 ರಾಜ್ಯ ಮಟ್ಟದ ವಿಚಾರ ಸಂಕಿರಣ

August 22, 2019

ಮೈಸೂರು, ಆ.21-ಮೈಸೂರು ವಿವಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಪೀಠದ ವತಿಯಿಂದ ಆ.23 ಮತ್ತು 24ರಂದು `ನೂರು ವರ್ಷಗಳ ಮೀಸಲಾತಿಯ ನಡಿಗೆ…ಒಂದು ಪರಿವೀಕ್ಷಣೆ’ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

ಮಾನಸಗಂಗೋತ್ರಿಯ ವಿಜ್ಞಾನ ಭವನ ಸಭಾಂಗಣದಲ್ಲಿ ಆ.23ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮೈಸೂರು ವಿವಿ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ. ಟಿ.ಡಿ.ಕೆಂಪರಾಜು ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 12.15ರಿಂದ 1.45ರವರೆಗೆ `ಮೀಸ ಲಾತಿಯ ಚಾರಿತ್ರಿಕ ಬೆಳವಣಿಗೆ ಮತ್ತು ಸಮಕಾಲೀನ ಚಿಂತಕರುಗಳ ಪರಿಕಲ್ಪನೆ ಕುರಿತು ಗೋಷ್ಠಿ ನಡೆಯಲಿದ್ದು, 2.15ರಿಂದ ಸಂಜೆ 4.15ರವರೆಗೆ `ಆಯೋಗಗಳ ವರದಿ’ ಕುರಿತು 2ನೇ ಗೋಷ್ಠಿ ನಡೆಯಲಿದೆ. ಆ.24ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮೀಸಲಾತಿ ವರ್ಗೀಕರಣ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಕುರಿತು ಗೋಷ್ಠಿ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4ರವರೆಗೆ `ಮೀಸಲಾತಿ ಇಲ್ಲದ ವಲಯಗಳಲ್ಲಿ ಒಳಗೊಳ್ಳುವಿಕೆ ಪ್ರಶ್ನೆ’ ಕುರಿತು ಗೋಷ್ಠಿ ನಡೆಯ ಲಿದೆ. ಸಂಜೆ 4.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಾಜಿ ಅಡ್ವೋ ಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಸಮಾರೋಪ ಭಾಷಣ ಮಾಡಲಿದ್ದಾರೆ.

Translate »