ಮೇ 24ರಿಂದ ಬ್ರಾಹ್ಮಣ ಯುವಕರಿಗಾಗಿ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ
ಮೈಸೂರು

ಮೇ 24ರಿಂದ ಬ್ರಾಹ್ಮಣ ಯುವಕರಿಗಾಗಿ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

May 22, 2019

ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ, ಮೈಸೂರು ಬ್ರಾಹ್ಮಣ ಯುವ ವೇದಿಕೆ ಆಶ್ರಯದಲ್ಲಿ ಮೇ 24ರಿಂದ ಮೂರು ದಿನಗಳ ಕಾಲ ಬ್ರಾಹ್ಮಣ ಯುವಕರಿಗಾಗಿ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರಿನ ಜೆ.ಕೆ.ಮೈದಾನದಲ್ಲಿ ನಡೆಯುವ ಪಂದ್ಯಾವಳಿಗೆ ಮೈಸೂರು, ಮಂಡ್ಯ, ಬೆಂಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳ ತಂಡಗಳು ಭಾಗವಹಿಸಲಿವೆ. ತಂಡದ ಆಟಗಾರರಿಗೆ ವೇದಿಕೆಯಿಂದ ವಸತಿ, ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದರು.

ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಥಮ ಬಹುಮಾನ 30,000 ರೂ.ನಗದು, ಟ್ರೋಫಿ, 2ನೇ ಬಹುಮಾನವಾಗಿ 20,000 ರೂ. ನಗದು, ಟ್ರೋಫಿ, ತೃತೀಯ ಬಹುಮಾನವಾಗಿ 10,000 ರೂ. ನಗದು, ಟ್ರೋಫಿ ನೀಡಲಾಗುವುದು. ಎಲ್ಲಾ ಆಟ ಗಾರರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಿದರು.

ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಾನಿಧ್ಯದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಎನ್.ವೆಂಕಟನಾರಾಯಣ್ ಉದ್ಘಾ ಟಿಸುವರು. ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಸಚಿವರಾದ ಜಿ.ಟಿ.ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಇನ್ನಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೇ 26ರಂದು ಸಂಜೆ 4.30 ಗಂಟೆಗೆ ಸಮಾ ರೋಪ ಸಮಾರಂಭದಲ್ಲಿ ಭಾರತ ತಂಡದ ಮಾಜಿ ಕ್ರಿಕೆಟ್ ಪಟು ಬಿ.ಎಸ್. ಚಂದ್ರಶೇಖರ್ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡುವರು. ಚಿತ್ರನಟರಾದ ಮಂಡ್ಯ ರಮೇಶ್, ರೂಪಾ ಅಯ್ಯರ್ ಇನ್ನಿತರರು ಭಾಗವಹಿಸುವರು ಎಂದರು. ಸುದ್ದಿಗೋಷ್ಠಿಯಲ್ಲಿ ನಗರ ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಮಾಜಿ ಸದಸ್ಯ ಎಂ.ಡಿ.ಪಾರ್ಥಸಾರಥಿ, ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ಕಡಕೊಳ ಜಗದೀಶ್, ಜಯಸಿಂಹ ಶ್ರೀಧರ್ ಉಪಸ್ಥಿತರಿದ್ದರು.

Translate »