ರಾಜ್ಯದಲ್ಲಿ ಮಳೆ ಹಾನಿಯ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ
ಮೈಸೂರು

ರಾಜ್ಯದಲ್ಲಿ ಮಳೆ ಹಾನಿಯ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

August 28, 2018

ಬೆಂಗಳೂರು: ಕೊಡಗು ಜಿಲ್ಲೆಯೂ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರು ತಿಂಗಳಿನಿಂದ ಬಿದ್ದ ಭಾರೀ ಮಳೆಯಿಂದ ಉಂಟಾಗಿ ರುವ ನಷ್ಟಕ್ಕೆ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಸನ, ಶಿವ ಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಮೈಸೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಆಗಿರುವ ಹಾನಿಯ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಸುಮಾರು 800 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇತರೆ ಜಿಲ್ಲೆಗಳಲ್ಲೂ ಹಲವಾರು ಮನೆಗಳು ಹಾನಿಯಾಗಿವೆ ಎಂಬ ವಿಷಯವನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಾಥಮಿಕ ಅಧ್ಯಯನದ ಪ್ರಕಾರ ಒಟ್ಟಾರೆ 2225 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಗಳು ಹಾನಿಗೊಳಗಾಗಿವೆ. 240 ಸೇತುವೆಗಳು ಕುಸಿದಿವೆ, 65 ಸರ್ಕಾರಿ ಕಟ್ಟಡ ಗಳು ಹಾನಿಗೊಳಗಾಗಿವೆ. ರಸ್ತೆ ಮತ್ತು ಸೇತುವೆ ಹಾಗೂ ಸರ್ಕಾರಿ ಕಟ್ಟಡಗಳ ದುರಸ್ತಿಗೆ ಸುಮಾರು 3000 ಕೋಟಿ ರೂ.ಗಳ ಅಗತ್ಯ ವಿರುವುದನ್ನು ಅಧಿಕಾರಿಗಳು ಸಭೆಯ ಗಮ ನಕ್ಕೆ ತಂದರು. ಸಭೆಯಲ್ಲಿ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ವಸತಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವಯು.ಟಿ.ಖಾದರ್, ಪ್ರವಾಸೋದ್ಯಮ ಹಾಗೂ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಗಂಗಾರಾಂ ಬಡೇರಿಯ, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ. ರವಿಶಂಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಭಾಗವಹಿಸಿದ್ದರು.

Translate »