ರಾಜ್ಯದಲ್ಲಿ ಹಂತ ಹಂತವಾಗಿ ಶಿಕ್ಷಣ ನೀತಿ ಜಾರಿ
ಮಂಡ್ಯ

ರಾಜ್ಯದಲ್ಲಿ ಹಂತ ಹಂತವಾಗಿ ಶಿಕ್ಷಣ ನೀತಿ ಜಾರಿ

September 7, 2021

ಮಂಡ್ಯ, ಸೆ.6(ಮೋಹನ್‍ರಾಜ್)- ಪ್ರತಿಯೊಬ್ಬರ ಬದುಕು ಹಸನಾಗಲಿಕ್ಕೆ ರಾಷ್ಟ್ರೀಯ ಶಿಕ್ಷಣ ಜಾರಿ ಆಗಬೇಕಿದ್ದು, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡಲಿದ್ದೇವೆ. ಈ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೊಸ ಭಾಷ್ಯಾ ಬರೆಯಲಿದ್ದೇವೆ ಎಂದು ಉನ್ನತ ಶಿಕ್ಷಣ ಹಾಗೂ ಐಟಿಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದರು.

ಸೋಮವಾರ ಮೈಸೂರಿಗೆ ತೆರಳುವ ಮಾರ್ಗಮಧ್ಯ ನಗರದಲ್ಲಿ ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು, ಈ ವಿಚಾರ ದಲ್ಲಿ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಜನ ಹಿಂದುಳಿಯಬೇಕು. ಸದೃಢರಾಗಬಾರದು ಅನ್ನುವುದು ಕೆಲವರಿಗಿದೆ. ಸರಿಯಾದ ಶಿಕ್ಷಣ ವಿಲ್ಲದೆ ಸಮಾಜಕ್ಕೆ ಅನ್ಯಾಯವಾಗ್ತಿತ್ತು. ಈಗ ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿದೆ. ರಾಜ್ಯ ಸರ್ಕಾರ ದೇಶದಲ್ಲೇ ಪ್ರಥಮವಾಗಿ ಶಿಕ್ಷಣ ನೀತಿ ಜಾರಿ ಮಾಡಿದೆ ಎಂದು ಹೇಳಿದರು.

ಪಾಲಿಕೆ ಚುನಾವಣೆ ಗೆಲುವು ಸರ್ಕಾರದ ಸಾಧನೆಯ ಸಾಕ್ಷಿ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸರ್ಕಾರದ ಸಾಧನೆಗೆ ಸಾಕ್ಷಿಯಾ ಗಿದೆ. ಭಾರತೀಯ ಜನತಾ ಪಾರ್ಟಿ ಉತ್ತಮ ವಾದ ಆಡಳಿತ ಕೊಟ್ಟಿದೆ. ಬಿಜೆಪಿ ಮೇಲೆ ಜನರ ಆಶೀರ್ವಾದ ಸದಾ ಇರುತ್ತೆ. ಹುಬ್ಬಳ್ಳಿ- ಧಾರವಾಡ ಮತ್ತು ಬೆಳಗಾವಿಯಲ್ಲಿ ನಮ್ಮ ಪಕ್ಷ ಉತ್ತಮವಾದ ಆಡಳಿತ ನೀಡಿದೆ. ಬೆಳಗಾವಿ ನಗರ ಬಹಳಷ್ಟು ಅಭಿವೃದ್ಧಿಯಾ ಗಿದ್ದು, ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಎಂದು ತಿಳಿಸಿದರು.

ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗ ಲಿದೆ: ಪೆಟ್ರೋಲ್, ಗ್ಯಾಸ್ ಬೆಲೆ ಹೆಚ್ಚಳಕ್ಕೆ ಬಿಜೆಪಿ ಕಾರಣವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆ ಆಗುತ್ತಿದೆ. ಹೀಗಾಗಿ ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಯಾಗಿದೆ. ಸದ್ಯದಲ್ಲೇ ಅದರ ಬೆಲೆ ಕಡಿಮೆ ಆಗಲಿದೆ. ಜನಸಾಮಾನ್ಯರ ಹಿತಕಾಯಲು ಬೆಲೆ ಕಡಿಮೆ ಮಾಡುವ ಪ್ರಯತ್ನ ಆಗಲಿದೆ ಎಂದರು. ಮುಂದಿನ ಚುನಾವಣೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಎದುರಿಸಲಾಗುವುದು. ಮುಂದಿನ ದಿನಗಳಲ್ಲಿ ಮಂಡ್ಯ ಭಾಗದಲ್ಲಿ ಸಿಎಂ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.

ಕೋವಿಡ್ ಮಾರ್ಗಸೂಚಿಯ ನಡು ವೆಯೂ ನಿಯಮಗಳನ್ನು ಸಡಿಲಗೊಳಿಸಿ ದ್ದೇವೆ. ಈಗ 5 ದಿನ ಹಬ್ಬ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ. ಹಬ್ಬದ ವಿಚಾರವಾಗಿ ಜನರ ಪರವಾಗಿ ನಿರ್ಧಾರ ಕೈಗೊಂಡಿದ್ದೇವೆ. ಜನರ ವಿರೋಧವಾಗಿ ಮಾಡಿಲ್ಲ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತು ವಾರಿ ಸಚಿವ ಕೆ.ಸಿ.ನಾರಾಯಣಗೌಡ, ಬಿಜೆಪಿ ನಗರಾಧ್ಯಕ್ಷ ವಿವೇಕ್, ಮುಖಂಡರಾದ ಅರವಿಂದ್, ಸಿದ್ದರಾಮಯ್ಯ ಇತರರಿದ್ದರು.

Translate »