ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆಗೆ ಕಡಿವಾಣ
ಮೈಸೂರು

ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆಗೆ ಕಡಿವಾಣ

April 27, 2022

ಬೆಂಗಳೂರು,ಏ.೨೬-ಆರೋಗ್ಯ ಇಲಾಖೆ ಯಲ್ಲಿ ಈ ವರ್ಷ ಮಾರ್ಗಸೂಚಿಯ ಪ್ರಕಾರವೇ ಅಧಿಕಾರಿಗಳು, ಸಿಬ್ಬಂದಿಯ ವರ್ಗಾವಣೆ ಮಾಡ ಲಾಗುವುದು. ಹಿಂದಿನAತೆ ಬೇಕಾಬಿಟ್ಟಿಯಾಗಿ ವರ್ಗಾವಣೆ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಂಗಳವಾರ ನಡೆದ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾ ಧಿಕಾರಿಗಳ (ಡಿಎಚ್‌ಒ) ಸಭೆಯಲ್ಲಿ ಮಾತನಾ ಡಿದ ಅವರು, ಮಾರ್ಗಸೂಚಿಯ ಪ್ರಕಾರ, ಶೇಕಡ ೧೫ರಷ್ಟು ಮಂದಿಯ ವರ್ಗಾವಣೆಗೆ ಮಾತ್ರ ಅವಕಾಶ ನೀಡಲಾಗುವುದು. ಹತ್ತು ವರ್ಷಗಳಿಂದ ಒಂದೇ ಸ್ಥಳದಲ್ಲಿರುವ ಅಧಿಕಾರಿಗಳನ್ನು ಬದಲಾ ವಣೆ ಮಾಡಲಾಗುವುದು ಎಂದರು.

ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಂಗ ಳೂರು ನಗರ ಬಿಟ್ಟು ಹೊರ ಹೋಗುತ್ತಿಲ್ಲ. ಅದನ್ನು ತಡೆಯಲು ಪರಸ್ಪರ ಕೋರಿಕೆ ವರ್ಗಾವಣೆಗಳನ್ನು ಪರಿಗಣ ಸುವುದಿಲ್ಲ ಎಂದು ಹೇಳಿದರು.

ಪ್ರತಿ ಬುಧವಾರ ಎಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳು ಮತ್ತು ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ. ಆರೋಗ್ಯ ಇಲಾಖೆ ಅಧಿಕಾರಿಗಳು ತಮ್ಮ ದೈನಂದಿನ ಕಾರ್ಯನಿರ್ವಹಣೆ ಕುರಿತು ದಿನಚರಿ ದಾಖಲಿಸುವು ದನ್ನೂ ಕಡ್ಡಾಯ ಮಾಡಲಾಗುವುದು ಎಂದರು.

ಡಿಎಚ್‌ಒಗಳೇ ಹೊಣೆ: ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದ ಜವಾಬ್ದಾರಿ ಡಿಎಚ್‌ಒಗಳಿಗೆ ಸೇರಿದ್ದು. ಯಾವುದೇ ಜಿಲ್ಲೆಯಲ್ಲಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಿನ್ನಡೆ ಆದರೆ ಡಿಎಚ್‌ಒಗಳನ್ನೇ ಹೊಣೆ ಮಾಡಲಾಗುವುದು ಎಂದು ಸುಧಾಕರ್ ಎಚ್ಚರಿಕೆ ನೀಡಿದರು.

ಯಾದಗಿರಿ, ಕೊಪ್ಪಳ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಯೋಜನೆಗಳ ಅನುಷ್ಠಾನದಲ್ಲಿ ಪ್ರಗತಿ ಕಡಿಮೆ ಇದೆ. ಜೂನ್ ೩೦ರೊಳಗೆ ಎಲ್ಲ ಯೋಜನೆಗಳಲ್ಲೂ ಶೇಕಡ ೮೦ರಷ್ಟು ಪ್ರಗತಿ ಸಾಧಿಸಬೇಕು. ‘ಸಿಸೇರಿಯನ್’ ಹೆರಿಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಡಯಾಲಿಸಿಸ್ ಕೇಂದ್ರಗಳಲ್ಲಿ ಉತ್ತಮ ಸೇವೆ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ನಿಯಮಾವಳಿ ಪಾಲನೆಯಿಂದ ೪ನೇ ಅಲೆ ತಡೆ
ಬೆಂಗಳೂರು,ಏ.೨೬(ಕೆಎAಶಿ)-ಸರ್ಕಾರದ ನಿಯಮಾವಳಿಗಳನ್ನು ಪಾಲಿಸಿ ದರೆ, ಕೋವಿಡ್ ೪ನೇ ಅಲೆ ತಡೆಯಲು ಸಹಕಾರಿಯಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೩ನೇ ಅಲೆಯಲ್ಲಿ ಸಾವು ನೋವು ಹೆಚ್ಚಿರಲಿಲ್ಲ. ಲಸಿಕಾಕರಣದಿಂದ ಈ ಅಲೆ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿಲ್ಲ. ನಾಲ್ಕನೆ ಅಲೆಗೆ ಮುನ್ನೆಚ್ಚರಿಕೆ ಅಗತ್ಯ. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿ ಪಾಲಿಸಿದರೆ, ಇದನ್ನೂ ನಾವು ಸಮರ್ಪಕವಾಗಿ ಎದುರಿಸಬಹುದು. ತಜ್ಞರ ಪ್ರಕಾರ ರೂಪಾಂತರ ತಳಿ, ಹೇಳಿಕೊಳ್ಳುವಷ್ಟು ಪ್ರಬಲವಾಗಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

Translate »