ಬೇಗೂರಿನಲ್ಲಿ ಬೀದಿ ನಾಯಿಗಳ ಕಾಟ
ಚಾಮರಾಜನಗರ

ಬೇಗೂರಿನಲ್ಲಿ ಬೀದಿ ನಾಯಿಗಳ ಕಾಟ

October 5, 2018

ಬೇಗೂರು: ಬೇಗೂರು ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೇಳತೀರದಾಗಿದೆ. ಎಲ್ಲೆಂದರಲ್ಲಿ ಗುಂಪು-ಗುಂಪಾಗಿ ತೆರಳುವ ನಾಯಿಗಳ ಹಿಂಡು ವಾಹನ ಸವಾರರಿಗೆ ಕಂಟಕ ಪ್ರಾಯವಾಗಿವೆ. ಗ್ರಾಮದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ತಪ್ಪಿಸಲುಹೋಗಿ ಅನೇಕ ವಾಹನ ಸವಾರರು ಗಾಯಗೊಂಡಿದ್ದಾರೆ. ಶಾಲೆಗೆ ತೆರಳುವ ಮಕ್ಕಳುಗಳು ಆತಂಕದಿಂದ ಶಾಲೆಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಗ್ರಾಪಂನವರು ನಾಯಿಗಳನ್ನು ಹಿಡಿಸಿ ಮುಂದಾಗುವ ಅನಾಹುತ ತಪ್ಪಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Translate »