ಸಬ್ ಅರ್ಬನ್ ಬಸ್ ನಿಲ್ದಾಣ ಬಳಿ ಮತ್ತೆ ತಲೆ ಎತ್ತಿದ ಬೀದಿ ಬದಿ ವ್ಯಾಪಾರ
ಮೈಸೂರು

ಸಬ್ ಅರ್ಬನ್ ಬಸ್ ನಿಲ್ದಾಣ ಬಳಿ ಮತ್ತೆ ತಲೆ ಎತ್ತಿದ ಬೀದಿ ಬದಿ ವ್ಯಾಪಾರ

December 9, 2019

ಮೈಸೂರು, ಡಿ.8(ಎಂಟಿವೈ)- ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಮತ್ತೆ ಬೀದಿ ಬದಿ ವ್ಯಾಪಾರಿಗಳು ವಹಿವಾಟು ಆರಂಭಿಸಿದ್ದಾರೆ. ಬಸ್ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಪರದಾಟ ಮುಂದುವರೆ ದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು-ನೀಲಗಿರಿ ಮುಖ್ಯ ರಸ್ತೆಯ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ವ್ಯಾಪಾರಿಗಳು ಫುತ್‍ಪಾತ್ ಆಕ್ರಮಿಸಿಕೊಂಡು ವಹಿವಾಟು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಪಾದಚಾರಿ ಮಾರ್ಗ ಬಿಟ್ಟು ರಸ್ತೆಯಲ್ಲಿಯೇ ನಡೆದು ಹೋಗ ಬೇಕಾದ ಪರಿಸ್ಥಿತಿ ಎದುರಾಗಿತ್ತು. ಅಲ್ಲದೇ ರಾತ್ರಿ ವೇಳೆ ಪಾದ ಚಾರಿಗಳು ನಡೆಯುವುದಕ್ಕೂ ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣ ವಾಗಿತ್ತು. ಪಾದಚಾರಿ ಮಾರ್ಗದಲ್ಲಿ ಒಂದು ಬದಿಯಲ್ಲಿ ಪ್ರೀ ಪೇಯ್ಡ್ ಆಟೋ ನಿಲ್ದಾಣದ ಆಟೋರಿಕ್ಷಾಗಳು ನಿಂತಿದ್ದರೆ, ಮತ್ತೊಂದು ಬದಿಯಲ್ಲಿ ವ್ಯಾಪಾರಿಗಳು ವಿವಿಧ ವಸ್ತುಗಳನ್ನು ರಸ್ತೆಗೆ ಜೋಡಿಸಿಕೊಂಡು ಮಾರಾಟದಲ್ಲಿ ಮಗ್ನರಾಗಿದ್ದರು. ಈ ಎರಡರ ನಡುವೆ ಕೇವಲ ಎರಡು ಅಡಿ ವಿಸ್ತೀರ್ಣದ ಸಂದಿಯಲ್ಲಿ ನೂರಾರು ಜನ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತ ವಾಗಿದ್ದು, ನಗರಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರ ಕಣ್ತಪ್ಪಿಸಿ ವ್ಯಾಪಾರಿಗಳು ರಾಜಾರೋಷವಾಗಿ ಫುತ್‍ಪಾತ್ ಅನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಕೆಲವರು ಇದರಲ್ಲಿ ಶಾಮೀಲಾಗಿ ರುವ ಸಾಧ್ಯತೆ ಇದೆ. ಮತ್ತೆ ಬೀದಿಬದಿಯಲ್ಲಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಟ್ಟರೆ ಯಾವ ಕಾರಣಕ್ಕಾಗಿ ತೆರವು ಕಾರ್ಯಾ ಚರಣೆ ನಡೆಸಿದರು ಎಂದು ತಿಳಿಯದಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಫುತ್‍ಪಾತ್‍ನಿಂದ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕು. ಗ್ರಾಮಾಂತರ ಬಸ್ ನಿಲ್ದಾಣದಿಂದ ವಿವಿಧ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೂ ಪ್ರತಿದಿನ ಸಾವಿ ರಾರು ಪ್ರಯಾಣಿಕರು ತೆರಳುತ್ತಾರೆ. ಆದರೆ ನಿಲ್ದಾಣದ ಬಳಿ ಪ್ರಯಾಣಿಕರು, ಸಾರ್ವಜನಿಕರು ಸಂಚರಿಸಲು ಫುತ್‍ಪಾತ್ ವ್ಯವಸ್ಥೆ ಇಲ್ಲದೇ ಇರುವುದು ತಲೆ ತಗ್ಗಿಸುವ ಸಂಗತಿಯಾಗಿದೆ. ಕೂಡಲೇ ಯಾವ ಪ್ರಭಾವಕ್ಕೂ ಒಳಗಾಗದೇ ಪೊಲೀಸರು ಕಾರ್ಯಾಚರಣೆ ಕೈಗೊಂಡು ಫುಟ್‍ಪಾತ್‍ನಲ್ಲಿ ಸಾರ್ವಜನಿಕರು ಓಡಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

Translate »