ಬೆಂಗಳೂರು: ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದ ರಾಮಯ್ಯ, ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರ ಆಪರೇಷನ್ ಕಮಲ ಕೂಡ ಬಿಜೆಪಿ ನಡೆಸು ತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿರುವ ಸಿದ್ದ ರಾಮಯ್ಯ, ‘ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯ ಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತ್ರೋರಾತ್ರಿ ಪೆÇಲೀಸ್ ಠಾಣೆಗೆ ಹೋಗಿ ಬಿಡಿಸಿ ಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‍ನವ ನೆಂದು ಹೇಳಿಕೊಂಡರೆ ಮಾತ್ರ ಪೆÇಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿ ದಿರಾ?.. ‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡ ಬಿಜೆಪಿ ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಹೇಳಿದ್ದಾರೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾ ಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಎಂದು ಕಿಡಿಕಾರಿದ್ದಾರೆ.