ಪರಿಸ್ಥಿತಿ ಕೈಮೀರುತ್ತಿರುವುದರಿಂದ ಕಠಿಣ ಕ್ರಮ ಅನಿವಾರ್ಯ
ಕೊಡಗು

ಪರಿಸ್ಥಿತಿ ಕೈಮೀರುತ್ತಿರುವುದರಿಂದ ಕಠಿಣ ಕ್ರಮ ಅನಿವಾರ್ಯ

April 24, 2021

ಮಡಿಕೇರಿ, ಏ.23- ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದರಿಂದ ಸರಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇಂತಹ ಕ್ರಮ ಅನಿವಾರ್ಯ ಎಂದು ಸಂಸದ ಪ್ರತಾಪ್‍ಸಿಂಹ ಸರಕಾರದ ಕ್ರಮವನ್ನು ಸಮರ್ಥಿ ಸಿಕೊಂಡರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಸಹಕಾರ ನೀಡಿದರೆ ವಾರ ಅಥವಾ ಹತ್ತು ದಿನದಲ್ಲಿ ಪರಿಸ್ಥಿತಿ ಹಿಡಿತಕ್ಕೆ ಬರಬಹುದು. ಆಮೇಲೆ ಕಠಿಣ ಕ್ರಮ ಸಡಿಲಿಕೆ ಆಗಬಹುದು. ಎಲ್ಲರೂ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಿ ಎಂದು ಮನವಿ ಮಾಡಿದರು. ಸರ್ಕಾರದ ಕಠಿಣ ಕ್ರಮದ ಬಗ್ಗೆ ಮಾಜಿ ಸಿ.ಎಂ. ಸಿದ್ದರಾಮಯ್ಯ ಅವರ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಕೂಡಾ ಕೋವಿಡ್ ಪಾಸಿಟಿವ್ ಆಗಿದ್ದರು. ಮಹಾಮಾರಿಯಿಂದ ತಪ್ಪಿಸಿಕೊಳ್ಳುವುದು ಎಲ್ಲರಿಗೂ ಕಷ್ಟ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ರಾಜಕಾರಣ ಮಾಡಬಾರದು. ಸಿದ್ದರಾಮಯ್ಯ ಅವರಿಗೆ ಸಾಕಷ್ಟು ಅನುಭವ ಇದೆ. ಅವರು ಒಳ್ಳೆಯ ನಾಯಕರು, ಅವರ ಬಗ್ಗೆ ಅನ್ಯತಾ ಹೇಳಲ್ಲ. ಕೋವಿಡ್ ಸಂದರ್ಭದಲ್ಲಿ ಅಪಸ್ವರದ ಮಾತು ಗಳಿಗೆ ಅವಕಾಶ ಆಗಬಾರದು. ರಾಜಕೀಯ ಪಕ್ಷಗಳು ತಮ್ಮ ಮುಖಂಡರು, ಕಾರ್ಯಕರ್ತರಿಗೆ ಅರಿವು ಮೂಡಿಸಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Translate »