ಕೊರೊನಾ ಸೋಂಕು ತಡೆಗೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ
ಮೈಸೂರು

ಕೊರೊನಾ ಸೋಂಕು ತಡೆಗೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

July 8, 2020

ಬೆಂಗಳೂರು, ಜು.7(ಕೆಎಂಶಿ)-ಕೋವಿಡ್-19 ಹರಡು ವಿಕೆಯನ್ನು ತಡೆಯಲು ಕೆಲವು  ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ.ರವೀಂ ದ್ರನ್ ಅವರ ತಂಡ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳ ಜೊತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ಮಾಡಿದೆ.

ಕೋವಿಡ್-19 ನಿರ್ವಹಣೆ ಲೋಪದೋಷಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟು, ಇವುಗಳನ್ನು ಸರಿಪಡಿಸಿ ಎಂದಿ ರುವುದಲ್ಲದೆ, ಕೆಲವು ವಿಚಾರಗಳಲ್ಲಿ ಸರ್ಕಾರ ಕೈಗೊಂಡಿ ರುವ ಕ್ರಮಗಳ ಬಗ್ಗೆಯು ಮೆಚ್ಚುಗೆ ವ್ಯಕ್ತಪಡಿಸಿದೆ. ಕೋವಿಡ್ ಸಾವಿನ ಪ್ರಮಾಣವನ್ನು 1.56ರಿಂದ ಶೇ.1ಕ್ಕೆ ಕಡಿಮೆ ಮಾಡಲು ಸೂಚಿಸಿರುವುದಲ್ಲದೆ, ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡುವುದಾಗಿಯೂ ತಿಳಿಸಿ ದ್ದಾರೆ. ಮನೆ ಮನೆಗೆ ಐಎಲ್‍ಐ ಪತ್ತೆ, ಟೆಸ್ಟಿಂಗ್ ಲ್ಯಾಬ್ ಹೆಚ್ಚಳ ಮಾಡಿ, ಕ್ವಾರಂಟೈನ್ ಮತ್ತಷ್ಟು ಬಿಗಿಗೊಳಿಸಿ ಎಂದು ತಿಳಿಸಿದೆ. ಕಂಟೇನ್ಮೆಂಟ್ ಝೋನ್‍ಅನ್ನು ಬಿಗಿಗೊಳಿಸಬೇಕು. ಆ ವಲಯದಲ್ಲಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಬೇಕು. 60 ವರ್ಷಕ್ಕೆ ಮೇಲ್ಪಟ್ಟವರು ಹಾಗೂ ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಿ, ಅವರನ್ನು ಪರೀಕ್ಷೆಗೆ ಒಳಪಡಿಸಿ ಎಂದು ತಿಳಿಸಿದೆ. ಕೇಂದ್ರದ ಆರೋಗ್ಯ ಇಲಾಖೆ ನಿಮಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಲಿದೆ. ಸಭೆಯ ನಂತರ ಮುಖ್ಯಮಂತ್ರಿಯವರ ಕಾರ್ಯಾಲಯ ಹೇಳಿಕೆ ನೀಡಿ, ಇಂದು ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ರಾಜ್ಯದ ಕೋವಿಡ್ ನಿರ್ವ ಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.

ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯ ದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ.ರವೀಂದ್ರನ್ ಅವರು ರಾಜ್ಯಕ್ಕೆ 2 ದಿನಗಳ ಭೇಟಿಯ ಸಂದರ್ಭದಲ್ಲಿ ಮುಖ್ಯ ಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸಂಪರ್ಕಿ ತರ ಪತ್ತೆ ಹಚ್ಚುವುದು ಹಾಗೂ ಕೊ-ಮಾರ್ಬಿಡ್ ವ್ಯಕ್ತಿಗಳನ್ನು ಗುರುತಿಸಿ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಈ ತಂಡವು ಪ್ರಶಂಸೆ ವ್ಯಕ್ತಪಡಿಸಿತು ಎಂದು ತಿಳಿಸಿದೆ. ಮುಂದಿನ ದಿನಗಳಲ್ಲಿ, ಕೋವಿಡ್‍ನಿಂದ ಉಂಟಾಗುವ ಮರಣವನ್ನು ತಡೆಗಟ್ಟಲು ಹಾಗೂ ರೋಗ ಲಕ್ಷಣ ಇರುವ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕಾಗಿದೆ. ಜೊತೆಗೆ ಕಂಟೇನ್ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಬೇಕಾಗಿದೆ ಎಂದು ಕೇಂದ್ರ ತಂಡದ ಅಧಿ ಕಾರಿಗಳು ಸಲಹೆ ನೀಡಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿ ತರ ಚಿಕಿತ್ಸೆಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆ ಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೈ ಫ್ಲೋ ಆಕ್ಸಿಜನ್ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ಆಗಸ್ಟ್ 15ರೊಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.

Translate »