ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ
ಚಾಮರಾಜನಗರ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ

June 19, 2018

ಚಾಮರಾಜನಗರ:  ನಗರ ದಲ್ಲಿ ಕೈಗೊಂಡಿರುವ ಎಲ್ಲ ರಸ್ತೆ ಕಾಮ ಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸ ಬೇಕೆಂದು ಹಿಂದುಳದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಚಾಮರಾಜನಗರ ಪಟ್ಟಣ ವ್ಯಾಪ್ತಿಯ ರಸ್ತೆ ಹಾಗೂ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿಯ ವಿಶೇಷ ಅನು ದಾನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೆದ್ದಾರಿ ವಿಸ್ತರಣೆ ಹಾಗೂ ಪಟ್ಟಣದ ವಿವಿ ಧೆಡೆ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿ ಗಳು ಚುರುಕುಗೊಳ್ಳಬೇಕು. ಈಗಾಗಲೇ ಕಾಮಗಾರಿ ಪೂರ್ಣವಾಗಲು ಸಾಕಷ್ಟು ವಿಳಂಬವಾಗಿದೆ. ಜನರು ಮತ್ತು ವಾಹನ ಗಳ ಸಂಚಾರಕ್ಕೆ ತೀವ್ರ ತೊಂದರೆಯಾಗು ತ್ತಿದೆ. ಹೀಗಾಗಿ ಇನ್ನು ವಿಳಂಬಕ್ಕೆ ಅವ ಕಾಶವಾಗದಂತೆ ಕಾಮಗಾರಿಯನ್ನು ಶೀಘ್ರ ಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ಚಿಕ್ಕಂಗಡಿ ಬೀದಿ, ರಥದ ಬೀದಿ ಸೇರಿ ದಂತೆ ಎಲ್ಲಾ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಚಾಮರಾಜೇಶ್ವರ ದೇವಾಲಯದ ಸುತ್ತಮುತ್ತಲ ಬಳಿ ಕೈ ಗೊಂಡಿರುವ ಕೆಲಸವು ಅದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.

ನಗರದ ಬಿ. ರಾಚಯ್ಯ ಜೋಡಿ ರಸ್ತೆ ಕಾಮಗಾರಿಯು ಸಾಕಷ್ಟು ಸಮಯದಿಂದ ನಡೆಯುತ್ತಿದೆ. ಈ ಕಾಮಗಾರಿಯ ವೇಗ ಹೆಚ್ಚಬೇಕು. ಈಗಾಗಲೇ ಒಂದು ಬದಿ ಯಲ್ಲಿ ರಸ್ತೆ ಕಾಮಗಾರಿ ನಿರ್ವಹಣೆಯಾಗು ತ್ತಿದೆ. ಇದನ್ನು ಪೂರ್ಣಗೊಳಿಸಿ ಸಂಚಾ ರಕ್ಕೆ ಅಡಚಣೆಯಾಗದಂತೆ ಮತ್ತೊಂದು ಬದಿಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೆತ್ತಿ ಕೊಳ್ಳಬೇಕೆಂದು ತಿಳಿಸಿದರು.

ನಗರದ ತರಕಾರಿ ಮಾರುಕಟ್ಟೆಯನ್ನು ಹೊಸದಾಗಿ ನಿರ್ಮಾಣ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಮಾರು ಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ನಡೆ ಸುತ್ತಿರುವವರಿಗೆ ಮಾರಿಗುಡಿ ಬೀದಿ ಸಮೀಪ ಸ್ಥಳಾವಕಾಶ ಮಾಡಿಕೊಡ ಬೇಕು. ಮಾರುಕಟ್ಟೆ ಕಾಮಗಾರಿಯನ್ನು ಶೀಘ್ರವೇ ಆgಂಭಿಸಲು ಅಗತ್ಯ ಪ್ರಕ್ರಿಯೆಗೆ ಮುಂದಾಗಬೇಕೆಂದು ಸಚಿವರು ನಿರ್ದೇ ಶನ ನೀಡಿದರು.
ಘನತ್ಯಾಜ್ಯ ಘಟಕದಲ್ಲಿ ಜಪಾನ್ ತಂತ್ರಜ್ಞಾನ ಬಳಕೆ ಮಾಡಿಕೊಂಡು ಗೊಬ್ಬರ ತಯಾರಿಸುವ 7.62 ಕೋಟಿ ರೂ. ವೆಚ್ಚದ ಪ್ರಸ್ತಾವ ಘಟಕವು ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು, ಈ ಸಂಬಂಧ ವಹಿಸಬೇಕಿ ರುವ ಅಗತ್ಯ ಕೆಲಸಕ್ಕೆ ಅದ್ಯತೆ ನೀಡಿ ಅವಶ್ಯಕ ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರು ಸಮಸ್ಯೆಗೆ ಸ್ಪಂದಿಸ ಬೇಕು. ಯಾವ ಭಾಗದಲ್ಲಿ ಸಮಸ್ಯೆ ಇದೆ ಎಂಬ ಮಾಹಿತಿ ಪಡೆದು ತಕ್ಷಣವೇ ಪರಿ ಹಾರ ಕ್ರಮಗಳಿಗೆ ಮುಂದಾಗಬೇಕು. ಪಟ್ಟಣ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತ ನಾಡಿ, ಸಚಿವರು ನೀಡಿರುವ ಸೂಚನೆ ಗಳನ್ನು ಚಾಚುತಪ್ಪದೆ ಪಾಲಿಸಬೇಕು. ಕಾಮಗಾರಿ ಪೂರ್ಣಗೊಳಿಸಲು ನೀಡಿ ರುವ ಗಡುವು ಅವಧಿಯೊಳಗೆ ಕೆಲಸ ಮಾಡಬೇಕು. ಕಾಮಗಾರಿ ಪರಿಶೀಲನೆ ಗಾಗಿ ವ್ಯಾಪಕವಾಗಿ ಸ್ಥಳಕ್ಕೆ ಭೇಟಿ ನೀಡ ಲಾಗುವುದು ಎಂದರು.

ನಗರಸಭೆ ಅಧ್ಯಕ್ಷರಾದ ಶೋಭಾ, ಉಪಾ ಧ್ಯಕ್ಷ ಆರ್.ಎಂ.ರಾಜಪ್ಪ, ಸದಸ್ಯ ಬಂಗಾರು, ಕನಿಷ್ಠ ವೇತನ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷ ಉಮೇಶ್, ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ಡಾ. ಕೆ. ಹರೀಶ್‍ಕುಮಾರ್, ಉಪ ವಿಭಾಗಾಧಿಕಾರಿ ಫೌಜಿಯಾ ತರನ್ನುಂ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »