ಪರಿಸರ ಪೂರಕ ಪ್ರವಾಸೋದ್ಯಮಕ್ಕೆ ಶ್ರಮ ವಹಿಸಿ
ಕೊಡಗು

ಪರಿಸರ ಪೂರಕ ಪ್ರವಾಸೋದ್ಯಮಕ್ಕೆ ಶ್ರಮ ವಹಿಸಿ

September 28, 2021

ಮಡಿಕೇರಿ, ಸೆ.27-ಪರಿಸರಕ್ಕೆ ಪೂರಕವಾದ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಈಶ್ವರ್‍ಕುಮಾರ್ ಖಂಡು ಸಲಹೆ ನೀಡಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ, ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಪಾಲು ದಾರರೊಂದಿಗೆ ಪ್ರವಾಸೋದ್ಯಮ ಇಲಾಖಾ ಸಭಾಂಗಣದಲ್ಲಿ ಸೋಮವಾರ ನಡೆದ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರವಾಸಿ ಮಾಹಿತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

`ಅಂತರ್ಗತ ಅಭಿವೃದ್ಧಿಗೆ ಪ್ರವಾಸೋದ್ಯಮ’ ಎಂಬುದು ಈ ವರ್ಷದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಗುರಿಯಾಗಿದೆ. ಮಕ್ಕಳು ಈಗಿನಿಂದಲೇ ಪರಿಸರಸ್ನೇಹಿ ಅಭ್ಯಾಸ ಬೆಳೆಸಿಕೊಳ್ಳ ಬೇಕು. ಕೊಡಗು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂ ಡಿದೆ. ಇಲ್ಲಿನ ಸಂಸ್ಕøತಿ, ಆಚಾರ-ವಿಚಾರ ಹಾಗೂ ಆಹಾರ ಪದ್ಧತಿ ವಿಶಿಷ್ಟವಾಗಿದೆ. ಕೊಡಗು ಜಿಲ್ಲೆಯು ಭಾರತದ ಸ್ಕಾಟ್‍ಲ್ಯಾಂಡ್ ಎಂಬ ಖ್ಯಾತಿ ಹೊಂದಿರುವುದು ಹೆಮ್ಮೆಯ ವಿಷಯ ಎಂದರು.

ಕೊಡಗಿನ ಪ್ರವಾಸಿ ತಾಣಗಳ ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ. ಆದ್ದರಿಂದ ಮಕ್ಕಳಿಗೆ ಚಿತ್ರಕಲೆ ಮೂಲಕ ಕೊಡಗಿನ ವೈವಿಧ್ಯತೆ ಮತ್ತು ಸ್ವಚ್ಛತೆಯ ಕುರಿತಾಗಿ ಜಾಗೃತಿ ಮೂಡಿಸಲಾಗು ತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಡಾ.ಪ್ರಿಯಾ, ತೀರ್ಪುಗಾರರಾಗಿ ಜನರಲ್ ತಿಮ್ಮಯ್ಯ ಶಾಲೆಯ ಕಲೆ ಮತ್ತು ಕರಕುಶಲ ಶಿಕ್ಷಕ ಭರತ್.ಕೆ.ಎಂ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ನರ್ತನ್, ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಶ್ವೇತಾ, ಪ್ರವಾಸಿ ಮಿತ್ರರು, ಮಕ್ಕಳು ಹಾಗೂ ಪೋಷಕರಿದ್ದರು.

Translate »