ಗ್ರಾಪಂ ಚುನಾವಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ
ಮೈಸೂರು

ಗ್ರಾಪಂ ಚುನಾವಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

December 6, 2020

ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕರೆ
ಬೆಂಗಳೂರು,ಡಿ.5(ಕೆಎಂಶಿ)-ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಯಾರು ತಮ್ಮ ಬೂತ್‍ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತಾರೋ ಅವರೇ ನಾಯಕರು ಎಂದು ಹೇಳಿದ್ದಾರೆ. ಪಕ್ಷದ ಸಿದ್ಧಾಂತದಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟ ದಿಂದ ಗ್ರಾಮಪಂಚಾಯತ್ ಚುನಾವಣೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ.

ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ ಇದೆ. 27 ಇಲಾಖೆಗಳಲ್ಲಿ ನೇರವಾಗಿ ಸಹಾಯ ಮಾಡುವ ಅವಕಾಶವಿದೆ. ಹೀಗಾಗಿ ಚುನಾವಣೆ ಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಪಂಚಾಯಿತಿಗಳಲ್ಲಿ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂದು ಅಲ್ಲಿನ ಕಾರ್ಯಕರ್ತರೇ ತೀರ್ಮಾನ ತೆಗೆದುಕೊಂಡು, ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕಾರ್ಯಕರ್ತರಲ್ಲಿ ಸಮನ್ವಯತೆ ಸಾಧಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಮಟ್ಟಗಳಿಗೆ ವೀಕ್ಷಕರನ್ನು ನೇಮಿಸಲಾಗಿದೆ ಎಂದು ವೀಕ್ಷಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ.

Translate »