ವಿದ್ಯಾರ್ಥಿ ನೇಣಿಗೆ ಶರಣು
ಹಾಸನ

ವಿದ್ಯಾರ್ಥಿ ನೇಣಿಗೆ ಶರಣು

July 25, 2018

ಚನ್ನರಾಯಪಟ್ಟಣ: ವಿದ್ಯಾರ್ಥಿವೋರ್ವ ನೇಣಿಗೆ ಶರಣಾಗಿರುವ ಪ್ರಕರಣ ತಾಲೂಕಿನ ಕಾರೇಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ತಾಲೂಕಿನ ನುಗ್ಗೇಹಳ್ಳಿ ಸಮೀಪದ ತಾವರೆಕೆರೆಯ ಪೃಥ್ವಿರಾಜ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ ಎಲ್ಲಾ ವಿದ್ಯಾರ್ಥಿಗಳು ಪ್ರಾರ್ಥನೆಗೆ ತೆರಳಿದ್ದ ವೇಳೆ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಚನ್ನ ರಾಯಪಟ್ಟಣ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »