ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
ಚಾಮರಾಜನಗರ

ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

July 15, 2018

ಚಾಮರಾಜನಗರ: ನಗರದ ಕರಿನಂಜ ನಪುರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲುದ್ದೇಸಿರುವ ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 3.25ಕೋಟಿ ವೆಚ್ಚದಡಿ 3 ಅಂತಸ್ತಿನ ಕಟ್ಟಡ ವನ್ನು ನಿರ್ಮಾಣ ಮಾಡಲು ಚಾಲನೆ ನೀಡಲಾಗಿದೆ. ಕಟ್ಟಡದಲ್ಲಿ 15 ಕೊಠಡಿ, 18 ಶೌಚಾಲಯ, 15 ಸ್ನಾನದ ಗೃಹ, ಪ್ರಥಮ ಚಿಕಿತ್ಸಾ ಕೊಠಡಿ, ವಿವಿಧೋದ್ದೇಶ ಕೊಠಡಿ, ಅಡುಗೆ ಮನೆ, ಬಟ್ಟೆ ಒಗೆಯಲು ಹಾಗೂ ಪಾತ್ರೆ ತೊಳೆಯಲು ಎರಡು ಕಡೆ ಸ್ಥಳಾವಕಾಶ, ನೀರಿನ ಸೌಲಭ್ಯ ಕ್ಕಾಗಿ ಒಂದು ಕೊಳವೆ ಬಾವಿ, ಸಂಪ್ ನಿರ್ಮಾಣ, ಒಳ ಚರಂಡಿ, ವಿದ್ಯುತ್ ಸೇರಿದಂತೆ ಸುತ್ತುಗೋಡೆ ನಿರ್ಮಾಣ ಮಾಡಲಾಗುವುದು ಎಂದು ವಿವರಿಸಿದರು.

ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಿ, ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿನಿಲಯ ನಿರ್ಮಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವ ಜೊತೆಗೆ, ಸರ್ಕಾರ ನೀಡುವ ಸೌಲಭ್ಯ ವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸ ಕೊಳ್ಳಬೇಕು ಎಂದು ಸಲಹೆ ನೀಡಿದರು.

 

Translate »