ವಿದ್ಯಾರ್ಥಿನಿ ಆತ್ಮಹತ್ಯೆ
ಕೊಡಗು

ವಿದ್ಯಾರ್ಥಿನಿ ಆತ್ಮಹತ್ಯೆ

September 26, 2018

ಸೋಮವಾರಪೇಟೆ: ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಇಲ್ಲಿಗೆ ಸಮೀಪದ ತಣ್ಣೀರುಹಳ್ಳ ಗ್ರಾಮದ ಅಣ್ಣಪ್ಪ ಎಂಬುವವರ ಪುತ್ರಿ ಟಿ.ಎ. ಜೀವಿತ(17) ನರಿಮೊಗರು ಸರ್ಕಾರಿ ಹಿಂದುಳಿದ ವರ್ಗದವರ ಹಾಸ್ಟೆಲ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಸೋಮವಾರ ಎಂದಿನಂತೆ ಕಾಲೇಜಿಗೆ ತೆರಳಿದ್ದ ಜೀವಿತ, ಮಧ್ಯಾಹ್ನದ ವೇಳೆಗೆ ಕಾಲೇಜಿನಿಂದ ಹಾಸ್ಟೆಲ್‍ಗೆ ತೆರಳಿ ತನ್ನ ಕೋಣೆ ಯಲ್ಲಿ ವೇಲ್‍ನಿಂದ ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಡುಗೆ ಯವರು ಕೋಣೆಯ ಕಿಟಿಕಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಸಂಜೆ ಸ್ವ ಗ್ರಾಮಕ್ಕೆ ಮೃತ ದೇಹವನ್ನು ತಂದು ಅಂತ್ಯಕ್ರಿಯೆ ನೆರವೇರಸಲಾಯಿತು.

Translate »