ವಿದ್ಯಾರ್ಥಿಗಳು ಮಾತೃಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೂ ಗಮನ ಹರಿಸಿ
ಚಾಮರಾಜನಗರ

ವಿದ್ಯಾರ್ಥಿಗಳು ಮಾತೃಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೂ ಗಮನ ಹರಿಸಿ

September 19, 2018

ಚಾಮರಾಜನಗರ:  ವಿದ್ಯಾರ್ಥಿಗಳು ಮಾತೃ ಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೂ ಗಮನ ಹರಿಸಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಕರಿನಂಜನಪುರ ರಸ್ತೆಯಲ್ಲಿ ಇರುವ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕø ತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಹಿರಿಯರಿಂದ ಕಿರಿಯರಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದು ಸ್ಪರ್ಧಾತ್ಮಕ ಯುಗ. ಈ ಯುಗ ದಲ್ಲಿ ಇಂಗ್ಲಿಷ್ ಬಹಳ ಮುಖ್ಯವಾಗಿದೆ. ವಿದ್ಯಾ ರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳಲು ಇಂಗ್ಲಿ ಷ್‍ನ್ನು ಕಲೆಯಲೇಬೇಕಾಗಿದೆ. ಈ ನಿಟ್ಟಿ ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ವಿಶೇಷ ಗಮನ ಹರಿಸಬೇಕು. ವಿದ್ಯಾಸಂಸ್ಥೆಗಳು ಉತ್ತಮ ಶಿಕ್ಷಕರನ್ನು ನಿಯೋಜನೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಸಲು ಮುಂದಾ ಗಬೇಕು ಎಂದು ಅವರು ಸಲಹೆ ನೀಡಿದರು.

ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಇದನ್ನು ಯಾವೊಬ್ಬ ವಿದ್ಯಾರ್ಥಿಯೂ ಹಾಳು ಮಾಡಿಕೊಳ್ಳಬಾರದು ಎಂದು ಕಿವಿ ಮಾತು ಹೇಳಿದ ಸಂಸದ ಧ್ರುವನಾರಾಯಣ್, ಗುಣಮಟ್ಟದ ಶಿಕ್ಷಣ ಪಡೆದು ಕಷ್ಟಪಟ್ಟು ಓದಿ ತಮ್ಮ ಜೀವನವನ್ನು ಉಜ್ವಲಗೊಳಿಸಿ ಕೊಳ್ಳುವಂತೆ ಕರೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ವಿ.ಆರ್.ಶ್ಯಾಮಲ ಮಾತ ನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಗಳಿಗೂ ರಜಾ ದಿನಗಳಂದು ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಅವಕಾಶ ಒದಗಿಸ ಲಾಗಿತ್ತು. ಆದರೆ ಇದಕ್ಕೆ ವಿದ್ಯಾರ್ಥಿಗಳಿಗೆ ಉತ್ತಮ ಸ್ಪಂದನೆ ಸಿಗಲಿಲ್ಲ. ಈ ದಸರೆ ರಜೆ ಸಮಯದಲ್ಲಿ ವಿಶ್ವಾಸ ಕಿರಣ ಯೋಜನೆಯಡಿ ಮತ್ತೆ ತರಗತಿಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳು ವಂತೆ ಸಲಹೆ ನೀಡಿದರು.

ಮಾಜಿ ಶಾಸಕ ಹಾಗೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎನ್.ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಮಾಜಿ ಅಧ್ಯಕ್ಷ ಎಸ್.ನಂಜುಂಡಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಸಂಸ್ಥೆಯ ಖಜಾಂಚಿ ಸಿ.ಪಿ.ರಾಜಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಚೆಲುವಯ್ಯ, ನಗರಸಭಾ ಸದಸ್ಯರಾದ ಮನೋಜ್ ಪಟೇಲ್, ಎಂ.ಕಲಾವತಿ, ಹಿರಿಯ ಪತ್ರಕರ್ತ ಕೆ.ಎಸ್. ಬನಶಂಕರ ಆರಾಧ್ಯ, ಕಾಲೇಜಿನ ಪ್ರಾಂಶು ಪಾಲ ಎನ್.ಮಹದೇವಸ್ವಾಮಿ, ಸಿ.ರಂಗಸ್ವಾಮಿ, ಬಿ.ಮಹದೇವಸ್ವಾಮಿ ಇತರÀರಿದ್ದರು.

Translate »