ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು
ಕೊಡಗು

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು

October 16, 2018

ಜಿಪಂ ಸದಸ್ಯ ಮಹೇಶ್ ಗಣಪತಿ
ವಿರಾಜಪೇಟೆ:  ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಶ್ರದ್ಧೆ ಮತ್ತು ಛಲದಿಂದ ತಮ್ಮ ಗುರಿಯನ್ನು ಸಾದಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಸರಕಾರಿ ಪದವಿ ಪೂರ್ವ ಕಾಲೇಜು ವಿರಾಜ ಪೇಟೆ, ಸಮೀಪದ ಆರ್ಜಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ 2018-19ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಗಿಡಕ್ಕೆ ನೀರು ಎರೆದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಸ್ವಚ್ಚತೆಯ ಕಡೆಗೆ ಗಮನ ಹರಿಸುವ ಮೂಲಕ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡಬೇಕು. ಹಾಗೂ ಗುರು ಹಿರಿಯರಿಗೆ ಗೌರವ ನೀಡುವ ಮೂಲಕ ಕೊಡಗಿನ ಪೃಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಂತಾಗಬೇಕು ಎಂದರು.

ನಾಪೋಕ್ಲು ಸ.ಪ.ಪೂ.ಕಾಲೇಜಿನ ಉಪನ್ಯಾಸಕರಾದ ಬೊಜ್ಜಂಗಡ ಡಾ. ಅವನಿತ ಸೋಮಯ್ಯ ಅವರು ಕಾರ್ಯ ಕ್ರಮದ ಮೊದಲಿಗೆ ದೀಪ ಬೆಳಗಿಸಿ ತಮ್ಮ ಉದ್ಘಾಟನಾ ಭಾಷಣದಲ್ಲಿ ವಿದ್ಯಾರ್ಥಿ ಗಳು ಎನ್.ಎಸ್.ಎಸ್.ಶಿಬಿರದಲ್ಲಿ ಕಲಿತ ನಾಯಕತ್ವದ ಉತ್ತಮ ಗುಣಗಳನ್ನು ತಮ್ಮ ಜೀವನದ ಲ್ಲಿಯೂ ಅಳವಡಿಸಿಕೊಳ್ಳುವಂತಾಗಬೇಕು. ಇತ್ತೀಚಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿ ಗಳು ಮೊಬೈಲ್ ಪೋನ್‍ಗಳ ಮುಖಾಂತರ ಎಲ್ಲಾ ಮಾಹಿತಿಗಳನ್ನು ತಿಳಿದುಕೊಳ್ಳು ತ್ತಾರೆ ಆದರೆ ಮೊಬೈಲ್‍ನ್ನು ಒಳ್ಳೆಯ ಕೆಲಸಗಳಿಗೆ ಮಾತ್ರ ಬಳಸಬೇಕು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಹೆಚ್ಚು ಜ್ಞಾನವನ್ನು ಪಡೆದುಕೊಂಡು. ಏಳು ದಿನಗಳು ಶಿಬಿರದಲ್ಲಿ ಕಲಿತ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಹೇಳಿದರು. ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ. ಗಣೇಶ್, ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎನ್.ಗಾಯತ್ರಿ, ವಿರಾಜ ಪೇಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಕೆ.ಜೋತಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಮತ ಅವರುಗಳು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಎನ್.ಎಸ್.ಎಸ್. ಶಿಬಿರಾಧಿಕಾರಿ ಎಂ. ದಿನೇಶ್ ಸ್ವಾಗತಿಸಿದರು. ವಿದ್ಯಾರ್ಥಿ ಎಂ. ರಾಹುಲ್ ನಿರೂಪಿಸಿದರೆ. ಅನುಷ ವಂದಿಸಿ ದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

Translate »