ಉಚಿತ ಲ್ಯಾಪ್‍ಟಾಪ್ ವಿತರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಚಾಮರಾಜನಗರ

ಉಚಿತ ಲ್ಯಾಪ್‍ಟಾಪ್ ವಿತರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

March 5, 2020

ಚಾಮರಾಜನಗರ, ಮಾ.4 (ಎಸ್‍ಎಸ್)- ಸರ್ಕಾರಿ ಇಂಜಿನಿಯ ರಿಂಗ್ ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಆಲ್‍ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಓ) ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗ ಸಮಾವೇಶಗೊಂಡ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದರು. ಬಳಿಕ, ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಲ್.ಆನಂದ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರವು ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ಯೋಜನೆಯನ್ನು ಘೋಷಿಸಿರುವುದು ಶ್ಲಾಘನೀಯ. ಇದರೊಂದಿಗೆ ತಾಂತ್ರಿಕ ಶಿಕ್ಷಣ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಗಳಿಗೂ ಉಚಿತ ಲ್ಯಾಪ್‍ಟಾಪ್‍ನ ಅವಶ್ಯ ಕತೆ ಇದೆ. ರಾಜ್ಯದ 12 ಸರ್ಕಾರಿ ಇಂಜಿನಿ ಯರಿಂಗ್ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರು ತಮ್ಮ ಪಠ್ಯಕ್ರಮದ ಎಷ್ಟೋ ಭಾಗಗಳನ್ನು ಪೂರೈಸಲು ಲ್ಯಾಪ್‍ಟಾಪ್ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸರ್ಕಾರಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಉಚಿತವಾಗಿ ಲ್ಯಾಪ್‍ಟಾಪ್ ನೀಡಬೇಕು ಎಂದು ಪ್ರತಿಭ ಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

ರಾಜ್ಯ ಸರ್ಕಾರ ಉಚಿತವಾಗಿ ಲ್ಯಾಪ್ ಟಾಪ್ ನೀಡುವುದರಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಸಹಾಯವಾಗು ತ್ತದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಮುಖಂಡರಾದ ಚಂದ್ರಕಲಾ, ರಾಜೇಂದ್ರ, ರಘು ಸೇರಿ ದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Translate »