ವಿಜ್ಞಾನ ಕಾಲೇಜು ಕಾರ್ಯಕ್ರಮದಲ್ಲಿ ಶ್ರೀ ಶಂಭುನಾಥ ಸ್ವಾಮೀಜಿ ಹಿತವಚನ
ಬೇಲೂರು, ಜು.7- ಇಂದಿನ ದಿನಗಳಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಓದುವು ದಕ್ಕಷ್ಟೇ ಸೀಮಿತವಾಗಿದ್ದಾರೆ. ಹೊಸ ಸಂಶೋಧನೆಗಳಿಗೆ ಮುಂದಾಗುತ್ತಿಲ್ಲ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಮಹಾ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಆದಿಚುಂಚನಗಿರಿ ಬೇಲೂರು ಸಂಸ್ಥೆಯ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದ ಮೊದಲ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಳೆದ ವರ್ಷ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವೈಜ್ಞಾನಿಕ ಮತ್ತು ಸಂಶೋಧನಾ ಮನೋಭಾವನೆಯನ್ನು ಹೊಂದಬೇಕು. ಓದಿನ ಜತೆಗೇ ಕ್ರೀಡೆ, ವಿಜ್ಞಾನ ಕ್ಷೇತ್ರದಲ್ಲಿ ಧೈರ್ಯದಿಂದ ತೊಡಗಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಉತ್ತೇಜಿಸಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾದುದು. ಅದನ್ನು ಹಾಳು ಮಾಡದೆ ಸದ್ಬಳಕೆ ಮಾಡಿಕೊಳ್ಳಬೇಕು. ಗುರು-ಹಿರಿಯರು, ತಂದೆ-ತಾಯಿಯರನ್ನು ಗೌರವಿಸು ವುದನ್ನು ಕಲಿಯಬೇಕು ಎಂದು ಕಿವಿಮಾತು ಹೇಳಿದರು,
ತಹಸಿಲ್ದಾರ್ ಮೇಘನಾ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ 5-6 ವರ್ಷಗಳು ಕಲಿಯುವುದು ತುಂಬಾ ಇರುತ್ತದೆ. ಕಲಿಯುತ್ತಲೇ ವಿದ್ಯಾರ್ಥಿ ಜೀವನವನ್ನು ಎಂಜಾಯ್ ಮಾಡಿರಿ. ನಿಮಗೇ ಗೊತ್ತಿಲ್ಲದಂತೆ ನಿಮ್ಮೊಳಗೊಂದು ಅದ್ಭುತ ಶಕ್ತಿ ಇರುತ್ತದೆ. ಅದು ಉಪ ಯೋಗಿಸಿಕೊಳ್ಳಿ. ಕಷ್ಟಪಟ್ಟು ಶ್ರದ್ಧೆಯಿಂದ ಓದಿ ಮುಂದೆ ಬನ್ನಿ. ನಿಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಿ. ತಂದೆ-ತಾಯಿಗೆ, ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರು ತನ್ನಿ ಎಂದು ಹಿತವಚನ ನೀಡಿದರು,
ಹೊಳೆನರಸೀಪುರದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕÀ ಹರೀಶ್ ಮಾತ ನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗೆ ಯಾವ ಶಿಕ್ಷಣದಲ್ಲಿ ಆಸಕ್ತಿ ಇದೆಯೋ ಅದನ್ನು ಗುರುತಿಸಿ ತಂದೆ-ತಾಯಿ ಪೆÇ್ರೀತ್ಸಾಹಿಸಬೇಕೇ ಹೊರತು ಒತ್ತಡ ಹೇರಬಾರದು ಎಂದರು.
ಬೇಲೂರು ಬಿಜೆ ವಿಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೆÇೀಷ ಕರು ಕಾರ್ಯಕ್ರಮದಲ್ಲಿದ್ದರು.