ಮೈಸೂರು: ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ ವತಿಯಿಂದ ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮ್ಮೇ ಳನದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯು ತ್ತಿರುವ ದೌರ್ಜನ್ಯ ತಡೆಗೆ ವಿದ್ಯಾರ್ಥಿನಿ ಯರಿಗೆ ಶಾಲಾ-ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆಗಳಾದ ಜುಡೋ, ಕರಾಟೆ ಯನ್ನು ಕಲಿಸುವುದರೊಂದಿಗೆ ಕಡ್ಡಾಯ ವಾಗಿ ಅಶ್ಲೀಲ ಸಿನಿಮಾ ಹಾಗೂ ಮದ್ಯ, ಮಾದಕ ವಸ್ತುಗಳನ್ನು ನಿಷೇಧಿಸುವಂತೆ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಕೈಗೊಳ್ಳಲಾಯಿತು.
ಇಂದು ಬೆಳಿಗ್ಗೆ ನಡೆದ 4ನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕøತಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಮಾತನಾಡಿ, ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬೇರ್ಯಾರಿಂ ದಲೋ ಸ್ವಾತಂತ್ರ್ಯ ಸಿಗುತ್ತದೆ ಎಂದು ಕಾಯದೆ, ಹೋರಾಟ ಮಾಡುವ ಮೂಲಕ ತಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವತ್ತ ಗಮನ ಹರಿಸಬೇಕು. ಪುರುಷ ಪ್ರಧಾನ ವ್ಯವಸ್ಥೆ ಯಲ್ಲಿ ಮಹಿಳೆಯರ ಮೇಲೆ ಅತ್ಯಂತ ಹೆಚ್ಚಿನ ಶೋಷಣೆಗಳು ನಡೆಯುತ್ತಿವೆ. ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ಆಚರಣೆ ಯಲ್ಲಿದೆ. ದೇಶದಲ್ಲಿ ಸಾಮಾಜಿಕ, ರಾಜ ಕೀಯ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳನ್ನು ಸಮಾನವಾಗಿ ಕಾಣುವ ಮನಸ್ಥಿತಿ ಇನ್ನು ಇಲ್ಲ. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವೆಂಬ ಹೆಗ್ಗಳಿಕೆ ಹೊಂದಿದ್ದರೂ, ಸಂವಿಧಾನದ ಆಶಯಗಳು ಸಂಪೂರ್ಣ ವಾಗಿ ಈಡೇರಿಲ್ಲ. ಸಂವಿಧಾನದಲ್ಲಿರುವ ಸಮಾನತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾರಿಯಲ್ಲಿದೆಯೇ ಎಂದು ಪ್ರಶ್ನಿಸಬೇಕಾದ ಅನಿವಾರ್ಯತೆ ಕಾಡುತ್ತಿದೆ ಎಂದು ವಿಷಾಧಿಸಿದರು.
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ನಳಿನಾ ಮಾತನಾಡಿ, ಪ್ರಸ್ತುತ ಹೆಣ್ಣುಮಕ್ಕಳಿಗೆ ಭದ್ರತೆ ಇಲ್ಲವಾಗಿದೆ. ಇದ ರಿಂದ ಗ್ರಾಮೀಣ ಪ್ರದೇಶದಲ್ಲಿ ಪೋಷ ಕರು ಮಕ್ಕಳನ್ನು ಉನ್ನತ ಶಿಕ್ಷಣಕ್ಕೆ ಕಳುಹಿ ಸುತ್ತಿಲ್ಲ. ಕೆಲವು ಹೆಣ್ಣುಮಕ್ಕಳು ಸಮಸ್ಯೆ ಗಳಿದ್ದರೂ ಅವುಗಳನ್ನು ಎದುರಿಸಿ ಶಿಕ್ಷಣ ಪಡೆಯಲು ಮುಂದೆ ಬರುತ್ತಾರೆ. ಅಂಥವ ರಿಗೆ ಕೆಲಸ ಮಾಡುವ ಸ್ಥಳದಲ್ಲಿ ಮಾನಸಿಕ ಹಾಗೂ ಲೈಂಗಿಕವಾಗಿ ಕಿರುಕುಳ ನೀಡ ಲಾಗುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರ ಹೆಣ್ಣುಮಕ್ಕಳಿಗೆ ಭದ್ರತೆಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷರಾದ ಬಿ.ಆರ್.ಅಪರ್ಣಾ, ಕಾರ್ಯದರ್ಶಿ ಎಸ್.ಶೋಭಾ, ಜಿಲ್ಲಾ ಕಾರ್ಯದರ್ಶಿ ಪಿ.ಎಸ್.ಸಂಧ್ಯಾ ಉಪಸ್ಥಿತರಿದ್ದರು.