ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ: ನ್ಯಾಯಾಧೀಶ ಶಿವಾನಂದ ಲಕ್ಷಣ್ ಅಂಚಿ
ಕೊಡಗು

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ: ನ್ಯಾಯಾಧೀಶ ಶಿವಾನಂದ ಲಕ್ಷಣ್ ಅಂಚಿ

August 4, 2018

ವಿರಾಜಪೇಟೆ: ವಿದ್ಯಾರ್ಥಿಗಳು ಕಲಿತಿರುವ ವಿದ್ಯೆಯನ್ನು ಸಾರ್ಥಕಪಡಿಸಿಕೊಂಡು ಮಾದಕ ವಸ್ತುಗಳನ್ನು ದೂರಮಾಡಿ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವಂತಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಾನಂದ ಲಕ್ಷ್ಮಣ್ ಅಂಚಿ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ ವಿರಾಜಪೇಟೆ ವಕೀಲರ ಸಂಘ, ವಿರಾಜಪೇಟೆ ಪ್ರಥಮದರ್ಜೆ ಕಾಲೇಜು, ಯೂತ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದುಷ್ಚಟವನ್ನು ದೂರವಿಟ್ಟು ತಮ್ಮ ಜೀವನದ ಕಡೆಗೆ ಗಮನಹರಿಸಿ ದೇಶದ ಉತ್ತಮ ಪ್ರಜೆಗಳಾಗುವಂತೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ. ಬೋಪಯ್ಯ ಮಾತನಾಡಿ, ಮಾದಕ ವಸ್ತುಗಳಿಗೆ ಬಲಿಯಾಗಿ ಅನೇಕ ಯುವಕರು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿರುವುದರಿಂದ ಯುವಕರು ವಿದ್ಯಾರ್ಥಿಗಳ ಸಂಘಟನೆಗಳು ಮಾದಕ ವಸ್ತುಗಳ ವಿರೂದ್ದ ಹೋರಾಟ ನಡೆಸಬೇಕಾಗಿದೆ. ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಮುಖ್ಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಗುರಿ ಮುಟ್ಟುವಂತಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಎಂ.ನಂಜಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿರಾಜಪೇಟೆ ಘಟ ಕದ ಕಾರ್ಯದರ್ಶಿ ಎನ್.ಕೆ.ನಳಿನಾಕ್ಷಿ ಸಭೆಯನ್ನುದ್ದೇಶಿಸಿ ಮಾತನಾಡಿ ದರು. ರೆಡ್‍ಕ್ರಾಸ್- ರೋವರ್ಸ್ ಮತ್ತು ರೇಂಜರ್ಸ್ ಅಧಿಕಾರಿ ಎಂ.ಎಸ್. ವನಿತ್ ಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿ ತಮ್ಮಯ್ಯ ನಿರೂಪಿಸಿದರೆ. ರೇಂಜರ್ಸ್ ಅಧಿಕಾರಿ ರಾಖಿ ಪೂವಣ್ಣ ವಂದಿಸಿದರು.

Translate »