‘ಪರೀಕ್ಷಾ ಪೇ ಚರ್ಚಾ’ ಸಂವಾದ ವೀಕ್ಷಿಸಿದ ವಿದ್ಯಾರ್ಥಿಗಳು
ಮೈಸೂರು

‘ಪರೀಕ್ಷಾ ಪೇ ಚರ್ಚಾ’ ಸಂವಾದ ವೀಕ್ಷಿಸಿದ ವಿದ್ಯಾರ್ಥಿಗಳು

April 3, 2022

ಚಾಮರಾಜನಗರ, ಏ.೧- ನವದೆಹಲಿಯ ತಾಳ್ಕ ಟೋರ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿಯ ವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಪರೀಕ್ಷಾ ಪೇ ಚರ್ಚಾ ನೇರ ಸಂವಾದ ಪ್ರಸಾರ ಕಾರ್ಯಕ್ರಮವನ್ನು ಜಿಲ್ಲೆಯ ಹೊಂಡರಬಾಳುವಿನ ಜವಹಾರ್ ನವೋದಯ ವಿದ್ಯಾಲಯ, ಮಾದಾಪುರದ ಕೇಂದ್ರೀಯ ವಿದ್ಯಾಲಯ ಸೇರಿದಂತೆ ಇತರೆಡೆ ವಿದ್ಯಾರ್ಥಿಗಳು ವೀಕ್ಷಿಸಿದರು.

ವಿದ್ಯಾರ್ಥಿಗಳಲ್ಲಿ ಕಲಿಕಾ ಭಯ ಹೋಗಲಾಡಿಸಲು ಹಾಗೂ ಪರೀಕ್ಷಾ ಆತಂಕ ದೂರ ಮಾಡಿ ಒತ್ತಡ ರಹಿತ ವಾತಾವರಣ ನಿರ್ಮಿಸಲು ಪೂರಕವಾದ ನೇರ ಸಂವಾದದ ಪ್ರಸಾರವನ್ನು ಹೊಂಡರಬಾಳುವಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ ಸಭಾಂಗಣದಲ್ಲಿ ವಿದ್ಯಾರ್ಥಿ ಗಳು ಆಸಕ್ತಿಯಿಂದ ವೀಕ್ಷಿಸಿದರು. ಸಂವಾದದ ಪ್ರಸಾರ ವೀಕ್ಷಣೆಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ಶಿಸ್ತಬದ್ದವಾಗಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ನಗರದ ಬಳಿಯಿರುವ ಮಾದಾಪುರದ ಕೇಂದ್ರೀಯ ವಿದ್ಯಾಲಯದಲ್ಲಿಯೂ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಪ್ರಸಾರವನ್ನು ವಿದ್ಯಾರ್ಥಿ ಗಳು ವೀಕ್ಷಿಸಲು ಸಕಲ ವ್ಯವಸ್ಥೆ ಮಾಡಲಾಗಿತ್ತು. ೬ ರಿಂದ ೧೧ ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸೆಮಿನಾರ್ ಹಾಲ್‌ನಲ್ಲಿ ಹಾಗೂ ೧ ರಿಂದ ೫ನೇ ತರಗತಿ ವಿದ್ಯಾರ್ಥಿ ಗಳಿಗೆ ಕಂಪ್ಯೂಟರ್ ಲ್ಯಾಬ್‌ನಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹ ದಿಂದ ಸಂವಾದ ಕಾರ್ಯಕ್ರಮವನ್ನು ವೀಕ್ಷಿಸಿದರು.

ಹೊಂಡರಬಾಳುವಿನ ಜವಹಾರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ವಿ. ಪ್ರಸಾದ್, ಮಾದಾ ಪುರದ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ನಿರ್ಮಲಾಕುಮಾರಿ, ಶಿಕ್ಷಣ ಅಧಿಕಾರಿಗಳಾದ ಮಂಜುನಾಥ್, ಲಕ್ಷಿö್ಮÃಪತಿ, ಬೋಧಕರಾದ ಯಲ್ಲಪ್ಪ ಬೈಯಾಪುರ, ಕುರಿಯನ್ ಥಾಮಸ್ ಇತರರಿದ್ದರು.

 

Translate »