ದೆಹಲಿ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪ್ರಧಾನಿ ಮೋದಿ ಜೊತೆ ವಿದ್ಯಾರ್ಥಿಗಳು
ಮೈಸೂರು

ದೆಹಲಿ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪ್ರಧಾನಿ ಮೋದಿ ಜೊತೆ ವಿದ್ಯಾರ್ಥಿಗಳು

January 25, 2021

ನವದೆಹಲಿ,ಜ.24-ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಸಂಭ್ರಮ ದಲ್ಲಿ ಪ್ರಧಾನಿ ಮೋದಿಯವರ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಭಾಗವಹಿಸಲು ಅವಕಾಶ ನೀಡುವುದಾಗಿ ಕೇಂದ್ರ ಶಿಕ್ಷಣ ಸಚಿವಾ ಲಯವು ಘೋಷಿಸಿದೆ. ಕೇಂದ್ರದ ಸಿಬಿಎಸ್ ಸಿಯ 10ನೇ ತರಗತಿ, ಪಿಯುಸಿ, ಪದವಿ ಪೂರ್ವ ಮತ್ತು ಸ್ನಾತರೋತ್ತರ ಪದವಿ ಪರೀಕ್ಷೆ ಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳು 2021ನೇ ಸಾಲಿನ ಗಣ ರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತಿದೆ. ಜ.26ರಂದು ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರೊಂದಿಗೆ ಮೆರ ವಣಿಗೆಯಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆಯಲಿದ್ದು, ‘ನಿಶಾಂಕ್’ ಎಂಬ ವಿದ್ಯಾರ್ಥಿಗೆ ಮೆಚ್ಚುಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೆÇೀಖ್ರಿಯಾಲ್ ತಿಳಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಈ ಬಾರಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆಯನ್ನು ತಗ್ಗಿಸಲಾಗಿದೆ. 600 ಸಾಂಸ್ಕೃತಿಕ ಕಾರ್ಯಕ್ರಮಗಳ ಬದಲಾಗಿ 401 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ದೆಹಲಿಯ ನಾಲ್ಕು ಶಾಲೆಗಳ 321 ವಿದ್ಯಾರ್ಥಿಗಳು, ಕೋಲ್ಕತ್ತಾ ಮೂಲದ 80 ಮಂದಿ ಜಾನಪದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯವು ತಿಳಿಸಿದೆ.

Translate »