ಇಂದು ಷಷ್ಠಿ: ಸಿದ್ದಲಿಂಗಪುರ ಬಳಿಯ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಮುಂಜಾನೆ  3ರಿಂದ ರಾತ್ರಿ 12 ಗಂಟೆವರೆಗೆ ದರ್ಶನ ವ್ಯವಸ್ಥೆ
ಮೈಸೂರು

ಇಂದು ಷಷ್ಠಿ: ಸಿದ್ದಲಿಂಗಪುರ ಬಳಿಯ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಮುಂಜಾನೆ 3ರಿಂದ ರಾತ್ರಿ 12 ಗಂಟೆವರೆಗೆ ದರ್ಶನ ವ್ಯವಸ್ಥೆ

December 13, 2018

ಮೈಸೂರು: ನಾಳೆ (ಡಿ.13) ಎಲ್ಲೆಡೆ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಷಷ್ಠಿ ಅಂಗ ವಾಗಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಬಳಿಯ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ದಲ್ಲಿ ಗುರುವಾರ ಮುಂಜಾನೆ 3ರಿಂದ ರಾತ್ರಿ 12 ಗಂಟೆ ವರೆಗೆ ದೇವರ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.

ಮುಂಜಾನೆಯೇ ದೇವರಿಗೆ ಅಭಿಷೇಕ, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಂತರ ಭಕ್ತಾದಿ ಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಸಾವಿರಾರು ಮಂದಿ ಧಾವಿಸುವುದರಿಂದ ಮೈಸೂರು ತಹಸೀಲ್ದಾರ್ ಟಿ.ರಮೇಶ್ ಬಾಬು ನೇತೃತ್ವದಲ್ಲಿ ಸುಬ್ರ ಹ್ಮಣ್ಯೇಶ್ವರ ದೇವಾಲಯದಲ್ಲಿ ಬ್ಯಾರಿಕೇಡ್ ಅಳವಡಿಸಿ ಸಾಲುಗಟ್ಟಿ ನಿಲ್ಲಲು ವ್ಯವಸ್ಥೆ ಮಾಡಲಾಗಿದೆ.

ಗ್ರಾಮ ಲೆಕ್ಕಿಗರು, ಕಂದಾಯಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳನ್ನು 3 ಪಾಳಿಯಲ್ಲಿ ನಿಯೋಜಿಸಲಾಗಿದ್ದು, ವಿಶೇಷ ದರ್ಶನ (ಶೀಘ್ರ ದರ್ಶನ)ಕ್ಕೆ 25 ರೂ.ಗಳನ್ನು ನಿಗದಿ ಪಡಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಅಗ್ನಿಶಾಮಕ ದಳ, ಆಂಬುಲೆನ್ಸ್, ಕುಡಿ ಯುವ ನೀರಿನ ಸೌಲಭ್ಯ, ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದ್ದು, ಖಾಸಗಿಯವರು ಪ್ರಸಾದ ವಿನಿಯೋಗ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೆಲವರು ಹಾವುಗಳನ್ನು ತಂದು ತನಿ ಎರೆಯಲು ಅವಕಾಶ ಕಲ್ಪಿಸುತ್ತಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದು, ಎಚ್ಚರ ವಹಿಸುವರು ಎಂದೂ ರಮೇಶ್ ಬಾಬು ಅವರು ತಿಳಿಸಿದ್ದಾರೆ. ಷಷ್ಠಿ ಜಾತ್ರೆ ಹಿನ್ನೆಲೆಯಲ್ಲಿ ದೇವ ಸ್ಥಾನವನ್ನು ಪುಷ್ಪಾಲಂಕಾರ ಹಾಗೂ ತಳಿರು-ತೋರಣಗಳಿಂದ ಶೃಂಗರಿಸಲಾಗಿದ್ದು, ರಸ್ತೆಯಲ್ಲಿ ಪೂಜಾ ಸಾಮಗ್ರಿಗಳು, ತಿಂಡಿ-ತಿನಿಸು, ಆಟಿಕೆ ವಸ್ತುಗಳ ಅಂಗಡಿಗಳು ತಲೆ ಎತ್ತಿವೆ. ಎನ್.ಆರ್.ಉಪ ವಿಭಾಗದ ಎಸಿಪಿ ಸಿ.ಗೋಪಾಲ್ ಅವರ ನೇತೃತ್ವದಲ್ಲಿ ಷಷ್ಠಿ ಜಾತ್ರೆಗೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Translate »