ಮುಡಾ ಅಧ್ಯಕ್ಷರಾಗಿ ಯಶಸ್ವಿ ಎಸ್.ಸೋಮಶೇಖರ್ ಅಧಿಕಾರ ಸ್ವೀಕಾರ
ಮೈಸೂರು

ಮುಡಾ ಅಧ್ಯಕ್ಷರಾಗಿ ಯಶಸ್ವಿ ಎಸ್.ಸೋಮಶೇಖರ್ ಅಧಿಕಾರ ಸ್ವೀಕಾರ

December 22, 2022

ಮೈಸೂರು, ಡಿ. 21(ಆರ್‍ಕೆ)-ಮುಡಾ ಅಧ್ಯಕ್ಷರಾಗಿ ಬಿಜೆಪಿ ಹಿರಿಯ ಮುಖಂಡ ಹಾಗೂ ಹೆಸರಾಂತ ಉದ್ಯಮಿ ಯಶಸ್ವಿ ಎಸ್.ಸೋಮಶೇಖರ್ ಇಂದು ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಹೆಚ್.ವಿ. ರಾಜೀವ್ ಅವರ ಅಧಿಕಾರ ಅಂತ್ಯಗೊಂಡ ನಂತರ ಕಳೆದ 5 ತಿಂಗಳಿಂದ ಖಾಲಿ ಇದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸ್ಥಾನಕ್ಕೆ ಮಂಗಳ ವಾರ ಯಶಸ್ವಿ ಎಸ್.ಸೋಮಶೇಖರ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರ ಡಿಸಿತ್ತು. ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಶಸ್ವಿ ಸೋಮಶೇಖರ್, ನನ್ನ ಮೇಲೆ ವಿಶ್ವಾಸವಿಟ್ಟು ಸರ್ಕಾರ ನನ್ನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿದೆ. ಮೈಸೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಲಭ್ಯವಿರುವ ಕಡಿಮೆ ಅವಧಿ ಯಲ್ಲಿ ಉತ್ತಮವಾಗಿ ಕೆಲಸ ಮಾಡಿ, ಸರ್ಕಾ ರಕ್ಕೆ ಒಳ್ಳೆಯ ಹೆಸರು ತರಲು ಯತ್ನಿಸು ತ್ತೇನೆ ಎಂದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಿ ಪ್ರಸ್ತಾಪಿತ ಹೊಸ ಯೋಜನೆಗಳಿಗೆ ಸರ್ಕಾರದ ಹಂತದಲ್ಲಿ ಪ್ರಕ್ರಿಯೆ ನಡೆಸಿ ಅನುಮೋದನೆ ಪಡೆದುಕೊಂಡು ಕಾರ್ಯ ಗತ ಮಾಡುತ್ತೇವೆ ಎಂದು ಅವರು ಇದೇ ಸಂದರ್ಭ ನುಡಿದರು. ಕಬಿನಿ ಕುಡಿಯುವ ನೀರು ಸರಬರಾಜು, ಸಿಎ ನಿವೇಶನಗಳ ಹಂಚಿಕೆ, ಗುಂಪು ಮನೆ ನಿರ್ಮಾಣ, ಪೆರಿ ಫೆರಲ್ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಟ್ಟು ನನ್ನ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸ ಮಾಡುವ ಮೂಲಕ ಮೈಸೂರು ನಗರ ಮತ್ತು ಸರ್ಕಾರಕ್ಕೆ ಒಳ್ಳೆಯ ಹೆಸರು ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿಯೂ ಸೋಮಶೇಖರ್ ತಿಳಿಸಿದರು. ನನ್ನ ಮೇಲಿನ ವಿಶ್ವಾಸ, ನಂಬಿಕೆ ಯಿಂದ ಮುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಹಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರು, ಶಾಸಕರು ಹಾಗೂ ಬಿಜೆಪಿ ಎಲ್ಲಾ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಡಾ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದರು. ಶಾಸಕ ಎಲ್.ನಾಗೇಂದ್ರ, ಮಾಜಿ ವಿಧಾನಪರಿಷತ್ ಸದಸ್ಯರಾದ ಡಿ.ಮಾದೇಗೌಡ, ತೋಂಟ ದಾರ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ, ಮುಡಾ ಆಯುಕ್ತ ಜಿ.ಟಿ.ದಿನೇಶ್‍ಕುಮಾರ್, ಸೂಪ ರಿಂಟೆಂಡಿಂಗ್ ಇಂಜಿನಿಯರ್ ಚೆನ್ನಕೇಶವ ಸೇರಿದಂತೆ ಇತರರು ನೂತನ ಅಧ್ಯಕ್ಷರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು.

Translate »