ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಎಸ್‍ಯುಸಿಐ ಪ್ರತಿಭಟನೆ
ಮೈಸೂರು

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಎಸ್‍ಯುಸಿಐ ಪ್ರತಿಭಟನೆ

June 18, 2020

ಮೈಸೂರು,ಜೂ.17(ಎಂಟಿವೈ)- ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ಮಾಡಿ, ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಟೀಕಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‍ಯುಸಿಐ) ಹಾಗೂ ರೈತ ಕೃಷಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೈಸೂರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಭೂ ಸುಧಾರಣಾ ಕಾಯ್ದೆಗೆ ತಿದ್ದು ಪಡಿ ಮಾಡದಂತೆ ಆಗ್ರಹಿಸಿದರು.

ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಣ್ಣ ರೈತರಿಂದ ಕೃಷಿ ಭೂಮಿ ಕಿತ್ತುಕೊಳ್ಳುವ ಸಂಚು. ರೈತರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿ, ಭೂಮಿಯನ್ನು ಮಾರಲು ಪ್ರಚೋದಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಿದ್ದುಪಡಿ ಆಹಾರ ಧಾನ್ಯ ಉತ್ಪಾದನೆ ಮೇಲೂ ದುಷ್ಪÀರಿಣಾಮ ಬೀರ ಲಿದೆ. ಇಂಥ ರೈತ ವಿರೋಧಿ, ಜನ ವಿರೋಧಿ ತೀರ್ಮಾನವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ದರು. ಎಸ್‍ಯುಸಿಐ(ಸಿ)ಜಿ¯್ಲÁ ಕಾರ್ಯ ದರ್ಶಿಗಳಾದ ಬಿ.ರವಿ, ಎಂ.ಉಮಾದೇವಿ, ಚಂದ್ರಶೇಖರ್, ಮೇಟಿ, ಸೀಮಾ, ಸಂಧ್ಯಾ, ಹರೀಶ್ ಪ್ರತಿಭಟನೆಯಲ್ಲಿದ್ದರು.

Translate »