ಮೈಸೂರು, ಆ.12(ಆರ್‍ಕೆಬಿ)- ಕೇಂದ್ರ ಸರ್ಕಾರ ಎರಡು ವರ್ಷದಿಂದ ಕಬ್ಬಿನ ಎಫ್‍ಆರ್‍ಪಿ ನಿಗದಿ ಮಾಡದೆ ನಿರ್ಲಕ್ಷ್ಯ ವಹಿಸಿದೆ. 2018ರಲ್ಲಿ ಶೇ.10 ಇಳುವರಿ ಬರುವ ಟನ್ ಕಬ್ಬಿಗೆ 2,750 ರೂ. ದರ ನಿಗದಿಯಾಗಿತ್ತು. 2019 ಹಾಗೂ 2020 ರಲ್ಲಿ ಎಫ್‍ಆರ್‍ಪಿ ನಿಗದಿ ಮಾಡದೆ ಸಕ್ಕರೆ ಕಾರ್ಖಾನೆ ಮಾಲೀಕರ ಒತ್ತಡಕ್ಕೆ ಮಣಿದು ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರು ಬೂರು ಶಾಂತಕುಮಾರ್ ಆರೋಪಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಕಬ್ಬು ಬೆಳೆಗಾರರು ತೊಂದರೆ ಅನು ಭವಿಸುತ್ತಿದ್ದರೂ ರಾಜ್ಯದ ಸಂಸದರು ಚಕಾರ ಎತ್ತುತ್ತಿಲ್ಲ. ಇದು ರೈತ ವಿರೋಧಿ ಧೋರಣೆ ಎಂದು ಟೀಕಿಸಿದರು. ಕೇಂದ್ರ ಸರ್ಕಾರ ಕೂಡಲೇ ಕಬ್ಬಿನ ಎಫ್‍ಆರ್‍ಪಿ ಯನ್ನು ಕನಿಷ್ಠ ಟನ್‍ಗೆ 3,200 ರೂ.ಗೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರಕ್ಕೆ ಪ್ರಾಮಾಣಿಕ ಕಳಕಳಿ ಇದ್ದರೆ ರೈತರ ಎಲ್ಲಾ ಉತ್ಪನ್ನಗಳಿಗೆ ವೈಜ್ಞಾನಿಕ ವಾಗಿ ಬೆಂಬಲ ಬೆಲೆ ನಿಗದಿಪಡಿಸಬೇಕು. ಸರ್ಕಾರವೇ ಖರೀದಿಸುವ ವ್ಯವಸ್ಥೆ ಜಾರಿ ಯಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಕೊರತೆ ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಅತಿವೃಷ್ಟಿ, ಕೊರೊನಾ ಸಂಕಷ್ಟ, ಬೆಲೆ-ಬೆಳೆ ನಷ್ಟದಿಂದ ಸಂಕಷ್ಟ ಅನುಭವಿಸುತ್ತಿ ರುವ ರೈತರಿಗೆ ಗೊಬ್ಬರ, ಬೀಜಗಳನ್ನು ದೊರಕಿಸಿಕೊಡುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿ ದರು. ಕಿರಗಸೂರು ಶಂಕರ್, ಹೆಚ್.ಎಸ್. ರಾಮೇಗೌಡ, ಬರಡನಪುರ ನಾಗರಾಜು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.