ಮೈಸೂರಲ್ಲಿ ಸಂಸದರು, ಶಾಸಕರ ಕಚೇರಿಗೆ ಕಬ್ಬು ಬೆಳೆಗಾರರ ಮುತ್ತಿಗೆ
ಮೈಸೂರು

ಮೈಸೂರಲ್ಲಿ ಸಂಸದರು, ಶಾಸಕರ ಕಚೇರಿಗೆ ಕಬ್ಬು ಬೆಳೆಗಾರರ ಮುತ್ತಿಗೆ

December 6, 2022

ಮೈಸೂರು,ಡಿ.5(ಎಂಟಿವೈ)- ಕಬ್ಬಿಗೆ ಸೂಕ್ತ ಎಫ್‍ಆರ್‍ಪಿ ದರ ನಿಗದಿ ಮಾಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಕಳೆದ 14 ದಿನಗಳಿಂದ ಬೆಂಗ ಳೂರಿನ ಫ್ರ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸು ತ್ತಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಸಂಸದ, ಶಾಸಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಮೈಸೂರಿನ ಜಲದರ್ಶಿನಿಯಲ್ಲಿರುವ ಸಂಸದ ಪ್ರತಾಪಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಬಳಿಕ ಸಂಸದ ಶ್ರೀನಿವಾಸಪ್ರಸಾದ್ ನಿವಾಸ, ಶಾಸಕ ಎಲ್. ನಾಗೇಂದ್ರ, ಎಸ್.ಎ.ರಾಮದಾಸ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. 14 ದಿನಗಳಿಂದ ಕಬ್ಬು ಬೆಳೆಗಾರರು ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಪ್ರಕಟಿಸದೆ ನಿರ್ಲಕ್ಷ್ಯ ಮಾಡಿದೆ. ಆಡಳಿತ ಪಕ್ಷದ ಸಂಸದರಾಗಿ, ಶಾಸಕರಾಗಿ ನಮ್ಮೆಲ್ಲರ ಪ್ರತಿನಿಧಿಯಾಗಿರುವುದರಿಂದ ನಮ್ಮ ಒತ್ತಾಯಗಳ ಬಗ್ಗೆ ಕೂಡಲೇ ಸರ್ಕಾರದ ಗಮನ ಸೆಳೆದು ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದರು.

ರಾಜ್ಯಕ್ಕಿಂತ ಸಕ್ಕರೆ ಇಳುವರಿ ಕಡಿಮೆ ಬರುವ ಪಂಜಾಬ್‍ನಲ್ಲಿ 3800, ಉತ್ತರಪ್ರದೇಶದಲ್ಲಿ 3500, ಗುಜರಾತ್‍ನಲ್ಲಿ 4400 ರೂ. ದರ ನಿಗದಿ ಮಾಡಿದ್ದಾರೆ. ಇದನ್ನು ಗಮನಿಸಿ ಎಫ್‍ಆರ್‍ಪಿ ಬೆಲೆಯನ್ನು ಕನಿಷ್ಠ ಇಳುವರಿಗೆ ಟನ್ 3500 ರೂ. ನಿಗದಿ ಮಾಡಬೇಕು. ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಯವರು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ. ಕಬ್ಬು ಕಟಾವು 16 ತಿಂಗಳಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿಲೋ ಮೀಟರ್ ಆಧಾರದ ದರ ಕಡಿತ ಮಾಡಬೇಕು. ಕಾನೂನುಬಾಹಿರವಾಗಿ ಹೆಚ್ಚುವರಿ ಮಾಡಿದರೆ ಆಯಾ ಡಿಸಿಗಳು ಕಾರ್ಖಾನೆಗಳ ಮೇಲೆ ಕ್ರಿಮಿನಲ್ ಮೊಕ ದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಕಟಾವು 16-18 ತಿಂಗಳು ವಿಳಂಬವಾಗು ತ್ತಿದೆ. ಈ ರೀತಿ ಕಟಾವು ಮಾಡಿದ ಕಬ್ಬಿಗೆ ವಿಳಂಬದ ಬಡ್ಡಿ ಸೇರಿಸಿ ಹೆಚ್ಚುವರಿ ದರ ಕೊಡಬೇಕು. ಕಬ್ಬು ಕಟಾವು ಸಾಗಾಣಿಕೆ ವೆಚ್ಚ ಕಡಿತಗೊಳಿಸಬೇಕು. ಸಕ್ಕರೆ ಕಾರ್ಖಾನೆ ಫೀಲ್ಡ್‍ಮನ್‍ಗಳು ಬಿಲ್‍ನಲ್ಲಿ ನೋಂದಾಯಿಸದೆ ರೈತ ರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ನಿಲ್ಲ ಬೇಕು. ರೈತ ಮತ್ತು ಕಾರ್ಖಾನೆ ನಡುವೆ ಸರ್ಕಾರ ಜಾರಿಗೆ ತಂದಿರುವ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ ಮಾಡಬೇಕು, ಒಪ್ಪಂದದ ಪತ್ರ ರೈತರಿಗೂ ಕೊಡಬೇಕು. ವಿದ್ಯುತ್ ಖಾಸಗೀಕರಣ ಕೈಬಿಡಬೇಕು, ಕೃಷಿ ಪಂಪ್‍ಸೆಟ್‍ಗಳಿಗೆ ಮೀಟರ್ ಅಳವಡಿಸುವುದನ್ನು ಕೈ ಬಿಡಬೇಕು. ಬ್ಯಾಂಕು ಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪದ್ಧತಿಯನ್ನು ಪರಿಗಣಿಸಿ ಸಾಲ ನೀಡುವ ಪದ್ಧತಿ ಕೈಬಿಡ ಬೇಕು. ಸರ್ಕಾರ ನೀಡುವ ಪರಿಹಾರ, ಪೆÇ್ರೀತ್ಸಾಹ ಧನ, ವಿಧವಾ ವೇತನ, ವೃದ್ಧಾಪ್ಯ ವೇತನದ ಹಣವನ್ನು ಸಾಲದ ಖಾತೆಗಳಿಗೆ ಜಮಾ ಮಾಡಬಾರದು.

ಬಗರ್‍ಹುಕುಂ ಸಾಗುವಳಿ ಹತ್ತಾರು ವರ್ಷಗಳಿಂದ ಕೃಷಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ, ಅರಣ್ಯ ಭೂಮಿಯನ್ನು ವ್ಯವಸಾಯ ಮಾಡುತ್ತಿರುವ ರೈತರಿಗೆ ಸಾಗುವಳಿ ಪಟ್ಟಾವನ್ನು ನೀಡಬೇಕು. ಕಾಡಂಚಿನಲ್ಲಿ ಪ್ರಾಣಿಗಳ ಹಾವಳಿ ತಪ್ಪಿಸಿ, ಕಾಡುಪ್ರಾಣಿಗಳಿಂದ ಆಗುವ ಬೆಳೆ ಹಾನಿ ಪರಿಹಾರ ವೈಜ್ಞಾನಿಕವಾಗಿ ನಷ್ಟ ಭರಿಸ ಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜು, ಮುಖಂಡರಾದ ಹಾಡ್ಯ ರವಿ, ಕೋಟೆ ಮಾದಪ್ಪ, ವೆಂಕಟೇಶ್, ಮಹದೇವಪ್ಪ, ಮಂಜುನಾಥ್, ಶಂಕರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Translate »