ಮೈಸೂರು, ಜು.2(ಪಿಎಂ)-ರೈತರು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾ ಕಾರರು, ಸರ್ಕಾರ ಸಾಲ ಮನ್ನಾ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಇದರಿಂದ ರೈತರು ಗೊಂದಲಕ್ಕೆ ಸಿಲುಕಿ ದ್ದಾರೆ. ಚುಂಚನಕಟ್ಟೆ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಭರವಸೆ ಹುಸಿ ಯಾಗಿದೆ. ಅಳಗಂಚಿ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ನಿರ್ಮಿಸಿರುವ ಎಥೆ ನಾಲ್ ಘಟಕದಿಂದ ಆ ಭಾಗದ ಅಂತ ರ್ಜಲ ಮತ್ತು ಪರಿಸರ ಮಾಲಿನ್ಯವಾಗು ತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
2019-20ನೇ ಸಾಲಿಗೆ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3,800 ರೂ. ಬೆಲೆ ನಿಗದಿ ಮಾಡಬೇಕು. ಈ ಸಾಲಿನ ಭತ್ತಕ್ಕೆ ಕನಿಷ್ಠ 2,200 ರೂ. ಬೆಲೆ ನಿಗದಿಗೊಳಿಸಬೇಕು. ಸಾಲ ಮರು ಪಾವತಿಸುವಂತೆ ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಕಿರುಕುಳ ನೀಡಲಾಗುತ್ತಿದ್ದು, ಇದನ್ನು ತಪ್ಪಿಸಬೇಕು. ಖಾಸಗಿ ಫೈನಾನ್ಸ್ ಕಂಪನಿಗಳಿಂದ ರೈತರ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವರುಣಾ ನಾಲೆ ನಿರ್ಮಾಣಕ್ಕೆ ಕೋಟಿ ಗಟ್ಟಲೆ ಹಣ ಖರ್ಚು ಮಾಡಿದ್ದರೂ ಮೇಗಲಾಪುರ, ಕೀಳನಪುರ ಸೇರಿದಂತೆ ಸುತ್ತಮುತ್ತಲ ಅಚ್ಚುಕಟ್ಟು ಪ್ರದೇಶಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಇದನ್ನು ಸರಿಪಡಿಸಲು ಸೂಕ್ತ ಕ್ರಮ ವಹಿಸಬೇಕು. ಹೊಸ ಅಗ್ರಹಾರ, ಹೊಸೂರು, ಸಾಲಿಗ್ರಾಮ ಕೆರೆಗಳ ಹೂಳು ತೆಗೆಯು ವಲ್ಲಿ ಗುತ್ತಿಗೆದಾರರು ಅವ್ಯವಹಾರ ನಡೆ ಸಿದ್ದು, ಇದರ ವಿರುದ್ಧ ಕ್ರಮ ಜರುಗಿಸ ಬೇಕು ಎಂದು ಒತ್ತಾಯಿಸಿದರು.
ಇದಕ್ಕೂ ಮುನ್ನ ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಳೇಮಿರ್ಲೆ ಸುನಯ್ಗೌಡ, ಸಂಘದ ಪದಾಧಿಕಾರಿಗಳಾದ ಎಂ.ಎಸ್.ರಾಜೇಂದ್ರ, ಜಗದೀಶ್, ಜಿ.ಮಾರಹಳ್ಳಿ ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.