ಗೃಹಿಣಿ ಆತ್ಮಹತ್ಯೆ
ಮಂಡ್ಯ

ಗೃಹಿಣಿ ಆತ್ಮಹತ್ಯೆ

December 10, 2019

ಪಾಂಡವಪುರ, ಡಿ.9- ಹೊಟ್ಟೆನೋವು ತಾಳಲಾರದೇ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟ ಣದ ಶಾಂತಿನಗರದ ನಿವಾಸಿ ಶಿವಕುಮಾರ್ ಪತ್ನಿ ಭವ್ಯಾ(30) ಆತ್ಮಹತ್ಯೆ ಮಾಡಿಕೊಂಡವರು. ಆಗಾಗ್ಗೆ ಕಾಣಿಸಿ ಕೊಳ್ಳುತ್ತಿದ್ದ ಹೊಟ್ಟೆ ನೋವಿಗೆ ಭವ್ಯಾ ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಹೊಟ್ಟೆ ನೋವು ಗುಣವಾಗಿರಲಿಲ್ಲ. ಮತ್ತೆ ಭಾನುವಾರ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭವ್ಯಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಬೆಳಿಗ್ಗೆ ಇದನ್ನು ಕಂಡ ಪತಿ ಶಿವಕುಮಾರ್ ಪಟ್ಟಣ ಪೊಲೀಸರಿಗೆ ವಿಷಯ ತಿಳಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಬಳಿಕ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾ ಯಿತು. ಈ ಸಂಬಂಧ ಪತಿ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Translate »