ಸುಳವಾಡಿ ವಿಷ ಪ್ರಸಾದ ದುರಂತ ಪ್ರಕರಣ ನ್ಯಾಯಾಲಯಕ್ಕೆ 6,163 ಪುಟಗಳ ಆರೋಪ ಪಟ್ಟಿ ಸಲ್ಲಿಕೆ
ಚಾಮರಾಜನಗರ

ಸುಳವಾಡಿ ವಿಷ ಪ್ರಸಾದ ದುರಂತ ಪ್ರಕರಣ ನ್ಯಾಯಾಲಯಕ್ಕೆ 6,163 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

March 19, 2019

ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ವಿಷ ಪ್ರಸಾದ ಪ್ರಕರಣದ ತನಿಖಾಧಿಕಾರಿ ಡಿವೈಎಸ್ಪಿ ಪುಟ್ಟಮಾದಯ್ಯ 6,163 ಪುಟಗಳ ಆರೋಪ ಪಟ್ಟಿಯನ್ನು ನಗರದ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಕಿಚ್‍ಗುತ್ ಮಾರಮ್ಮ ದೇವಸ್ಥಾನದ ಹಿಡಿತ ಸಂಪೂರ್ಣವಾಗಿ ತಮ್ಮ ಕೈಯಲ್ಲೇ ಇರಬೇಕೆಂಬ ದುರುದ್ದೇಶದಿಂದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ಅವರು ಪ್ರಸಾದದಲ್ಲಿ ವಿಷ ಬೆರೆಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ದೇವಾಲಯದ ಆದಾಯ, ಚಿನ್ನ, ಆಡಳಿತ ಎಲ್ಲವೂ ಇಮ್ಮಡಿ ಮಹದೇವಸ್ವಾಮಿ ನಿಯಂತ್ರಣಕ್ಕೆ ಬರಬೇಕು. ಮಾದೇಶ ಅಂಬಿಕಾ ದಂಪತಿಗೆ ಹೆಚ್ಚಿನ ಅಧಿಕಾರ ಸಿಗಬೇಕು ಎಂಬ ಉದ್ದೇಶದಿಂದ, ದೊಡ್ಡಯ್ಯ ವೈಯಕ್ತಿಕ ದ್ವೇಷದಿಂದ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ವಿಷಪ್ರಸಾದ ಸೇವಿಸಿ ಅಸ್ವಸ್ಥಗೊಂಡ ವರು, ದೇವಸ್ಥಾನದ ಟ್ರಸ್ಟಿಗಳು, ಗ್ರಾಮಸ್ಥರು, ವೈದ್ಯರು ಸೇರಿದಂತೆ 322 ಸಾಕ್ಷ್ಯಗಳ ಹೇಳಿಕೆಗಳನ್ನು ಸಂಗ್ರಹಿಸಲಾಗಿದೆ. ಆರೋಪಿ ಗಳ ವಿರುದ್ಧ ದೊರೆತಿರುವ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಮರಣೋತ್ತರ ಪರೀಕ್ಷೆಯ ವರದಿ ಸೇರಿ ದಂತೆ ಹಲವು ತಾಂತ್ರಿಕ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

2018 ಡಿಸೆಂಬರ್ 14ರಂದು ಸುಳ ವಾಡಿಯ ಕಿಚ್‍ಗುತ್ ಮಾರಮ್ಮ ದೇವ ಸ್ಥಾನದಲ್ಲಿ ವಿತರಿಸಿದ ವಿಷ ಪ್ರಸಾದ ಸೇವನೆ ಯಿಂದ 17 ಭಕ್ತರು ಮೃತಪಟ್ಟು ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು.

Translate »