ಸುಮಲತಾ ಅಂಬರೀಶ್ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ: ಹೆಚ್‍ಡಿಕೆ
ಮೈಸೂರು

ಸುಮಲತಾ ಅಂಬರೀಶ್ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ: ಹೆಚ್‍ಡಿಕೆ

April 6, 2019

ಬೆಂಗಳೂರು: ರೈತರ ಕೃಷಿ ಸಾಲ ಮನ್ನಾ ಕುರಿತು ಸ್ವತಃ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳೇ ಸ್ಪಷ್ಟ ಪಡಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ರೈತರ ಸಾಲ ಮನ್ನಾ ಯೋಜನೆ ಜಾರಿಗೆ ತರಲು ಸಾಧ್ಯ ವಿಲ್ಲ ಎಂಬುದಾಗಿ ಹಣಕಾಸು ಇಲಾಖೆ ಅಧಿಕಾರಿಗಳೇ ಹೇಳಿದ್ದಾರಲ್ಲಾ ಎಂಬ ವರದಿಗೆ ಪ್ರತಿಕ್ರಿಯಿಸಿರುವ ಅವರು, ಈ ಬಗ್ಗೆ ನಾನೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆ ರೀತಿ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದಿದ್ದಾರೆ. ಇಂತಹ ಗೊಂದಲ ಕಾರಿ ಹೇಳಿಕೆ ನೀಡಿ ನಾಡಿನ ಜನರ ಅದರಲ್ಲೂ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೃಷಿ ಸಾಲ ಮನ್ನಾಕ್ಕೆ ಸಹಕಾರಿ ಹಾಗೂ ವಾಣಿಜ್ಯ ಬ್ಯಾಂಕ್‍ಗಳ 15.58 ಲಕ್ಷ ರೈತರ 6223.48 ಕೋಟಿ ರೂ. ಮಂಜೂರು ಮಾಡಲಾಗಿದೆ. 2019-20ರ ಆಯವ್ಯಯದಲ್ಲಿ 12,000 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಮಾಹಿತಿ ಜಾಲತಾಣದಲ್ಲೂ ಲಭ್ಯವಿದೆ. ಕೃಷಿಕರ ಕಾಳಜಿಗೆ ನನ್ನ ಬದ್ಧತೆ ಕುರಿತು ಅವರು ಮಾತನಾಡುವ ಅಗತ್ಯವಿಲ್ಲ. ಕಳೆದ ಎರಡು ಆಯವ್ಯಯಗಳಲ್ಲಿ ಘೋಷಿಸಿ ಜಾರಿಗೊಳಿಸುತ್ತಿರುವ ದೂರದೃಷ್ಟಿ ಕಾರ್ಯಕ್ರಮಗಳೇ ಇದಕ್ಕೆ ಸಾಕ್ಷಿ ಎಂದರು.

ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ಮೈತ್ರಿ ಸರ್ಕಾರ ಕೈಗೊಂಡಿರುವ ಕ್ರಮ ಸಾಲ ಮನ್ನಾ ಒಂದೇ ಅಲ್ಲ. ಬಿತ್ತನೆಯಿಂದ ಹಿಡಿದು ಬೆಳೆ ಸಂಸ್ಕರಣೆ, ಸಂಗ್ರಹಣೆವರೆಗೆ ಎಲ್ಲ ಹಂತದಲ್ಲೂ ನೆರವು ನೀಡಲು ಸರ್ಕಾರ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 46 ಸಾವಿರ ಕೋಟಿ ರೂ.ಗೂ ಹಣ ಒದಗಿಸಲಾಗಿದೆ. ಆಧಾರವಿಲ್ಲದೆ ಗಂಭೀರ ಆರೋಪ ಮಾಡುವ ಮುನ್ನ ವಸ್ತುಸ್ಥಿತಿ ಅರಿತು ಮಾತನಾಡುವುದು ಸೂಕ್ತ ಎಂದಿದ್ದಾರೆ.

2 ದಿನದಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ದೇಶ ವಿರೋಧಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿ ಕ್ರಿಯಿಸಿ, ನರೇಂದ್ರ ಮೋದಿ ಒಬ್ಬರೇ ದೇಶದ ರಕ್ಷಣೆ ಮಾಡುವು ದಿಲ್ಲ ಎಂದರು. ದಿನಾ ಮೋದಿ ಬಗ್ಗೆ ಸುದ್ದಿ ಮಾಡಿಕೊಳ್ಳಿ ಯಾರು ಬೇಡ ಅಂತಾರೆ, ಈಗ ಪ್ರಣಾಳಿಕೆ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಸಿಟ್ಟಿನಿಂದ ಹೇಳಿದರು. ಎಐಸಿಸಿ ಅಧ್ಯಕ್ಷ ರಾಹುಲ್ ಕೇರಳದ ವಯನಾಡಿ ನಿಂದ ಸ್ಪರ್ಧೆ ಕುರಿತ ಪ್ರಶ್ನೆಗೆ ಏನನ್ನೂ ಪ್ರತಿಕ್ರಿಯಿಸದೆ ಸ್ಥಳದಿಂದ ತೆರಳಿದರು.

Translate »