ಕೇಂದ್ರೀಯ ಶಾಲಾ ಕಟ್ಟಡ, ರೈಲ್ವೆ ಮೇಲ್ಸೇತುವೆ ನಿರ್ಮಾಣ ಅನುದಾನಕ್ಕೆ ಸುಮಲತಾ ಮನವಿ
ಮಂಡ್ಯ

ಕೇಂದ್ರೀಯ ಶಾಲಾ ಕಟ್ಟಡ, ರೈಲ್ವೆ ಮೇಲ್ಸೇತುವೆ ನಿರ್ಮಾಣ ಅನುದಾನಕ್ಕೆ ಸುಮಲತಾ ಮನವಿ

December 14, 2019

ಮಂಡ್ಯ, ಡಿ.13- ನಗರದಲ್ಲಿ ನೂತನ ಕೇಂದ್ರೀಯ ವಿದ್ಯಾಲಯದ ಶಾಲಾ ಕಟ್ಟಡ ನಿರ್ಮಾಣಕ್ಕೆ ಹಾಗೂ ರೈಲ್ವೆ ಹಳಿಗೆ ಅಡ್ಡ ಲಾಗಿ ಮೇಲ್ಸೇತುವೆ ನಿರ್ಮಾಣ ಕಾಮ ಗಾರಿಗೆ ಅಗತ್ಯ ಅನುದಾನ ಬಿಡುಗಡೆಗೆ ಒತ್ತಾಯಿಸಿ ಶುಕ್ರವಾರ ದೆಹಲಿಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸಚಿವರುಗಳಿಗೆ ಮನವಿ ಸಲ್ಲಿಸಿದ್ದಾರೆ.

ಮೊದಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೆÇೀಖ್ರಿಯಾಲ್ ಅವರನ್ನು ಅವರ ಕಚೇರಿಯಲ್ಲೇ ಭೇಟಿ ಮಾಡಿದ ಸುಮಲತಾ ಅಂಬರೀಶ್, ಶಿಥಿ ಲಾವಸ್ಥೆಯಲ್ಲಿರುವ ಮಂಡ್ಯ ನಗರದ ಕೇಂದ್ರೀಯ ವಿದ್ಯಾಲಯ ಶಾಲೆಯ ವಿದ್ಯಾರ್ಥಿ ಗಳು ಮತ್ತು ಶಿಕ್ಷಕರಿಗೆ ಅನುವಾಗುವಂತೆ ನೂತನ ಕೇಂದ್ರೀಯ ವಿದ್ಯಾಲಯ ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡು ಗಡೆಗೊಳಿಸಲು ಮನವಿ ಸಲ್ಲಿಸಿದರು. ಬಳಿಕ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದ ಅವರು, ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾವೀರ ಸರ್ಕಲ್‍ನಿಂದ ಮಾರುಕಟ್ಟೆ ಹಾಗೂ ಜೈನರ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ರೈಲ್ವೆ ಹಳಿಗೆ ಅಡ್ಡಲಾಗಿ ಮೇಲ್ಸೇ ತುವೆ ನಿರ್ಮಾಣ ಕಾಮಗಾರಿ ಅನುಷ್ಠಾನಗೊಳಿ ಸಲು ಈ ಬಾರಿಯ ಬಜೆಟ್‍ನಲ್ಲಿ ಅನುದಾನ ಬಿಡುಗಡೆಗೊಳಿಸಲು ಮನವಿ ಸಲ್ಲಿಸಿದರು.

Translate »