ಭಾನುವಾರದ ಲಾಕ್‍ಡೌನ್ ಯಶಸ್ವಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಮೈಸೂರು

ಭಾನುವಾರದ ಲಾಕ್‍ಡೌನ್ ಯಶಸ್ವಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

May 25, 2020

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸ ಲಾಗಿದ್ದ 4.0 ಭಾನುವಾರದ ಲಾಕ್‍ಡೌನ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಚಿಕ್ಕ ಪುಟ್ಟ ಸಮಸ್ಯೆಗಳು ಎದುರಾಗಿದ್ದರೂ ಅವುಗಳನ್ನು ಕರ್ತವ್ಯ ನಿರತ ಪೆÇಲೀಸರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಹೊರಗಿನಿಂದ ಬಂದ ವರೇ ಹೆಚ್ಚು ಕಿರಿಕಿರಿ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಚೆಕ್ ನೀಡುವ ಯಾವುದೇ ಹಕ್ಕಿಲ್ಲ. ಆದ್ದ ರಿಂದಲೇ ಅವರು ಪದೇಪದೆ ಚೆಕ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

Translate »