ಸಿಎಂ ಬಹಿರಂಗ ಕ್ಷಮೆ ಯಾಚನೆಗೆ ಆಗ್ರಹ
ಮೈಸೂರು

ಸಿಎಂ ಬಹಿರಂಗ ಕ್ಷಮೆ ಯಾಚನೆಗೆ ಆಗ್ರಹ

October 31, 2018

ಮಂಡ್ಯ: ಸಿಎಂ ಕುಮಾರಸ್ವಾಮಿ ವಿರುದ್ಧ ರೈತ ಮುಖಂಡ, ಮಾಜಿ ಶಾಸಕ ಪುಟ್ಟಣ್ಣಯ್ಯ ಪತ್ನಿ ಸುನೀತಾ ಪುಟ್ಟಣ್ಣಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸಿಎಂ ಕುಮಾರಸ್ವಾಮಿ ನಮ್ಮ ಮಗ ದರ್ಶನ್ ವಿದೇಶದಿಂದ ಬಂದು ರೈತರ ಅನುಕಂಪ ಗಿಟ್ಟಿಸಲು ಯತ್ನಿಸಿದರು ಎಂದು ಹಗುರವಾಗಿ ಮಾತನಾಡಿದ್ದಾರೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಬಹಿರಂಗ ಕ್ಷಮೆಯಾಚನೆ ಮಾಡಬೇಕು ಎಂದು ಸುನೀತಾ ಪುಟ್ಟಣ್ಣಯ್ಯ ಆಗ್ರಹಿಸಿದ್ದಾರೆ.

ರೈತ ನಾಯಕ, ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ನಿವಾಸಕ್ಕೆ, ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ, ಮಾಜಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಟಿ.ಬಿ. ಜಯಚಂದ್ರ ಭೇಟಿ ನೀಡಿ ಮೈತ್ರಿ ಕೂಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಈ ವೇಳೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಸುನೀತಾ ಪುಟ್ಟಣ್ಣಯ್ಯ, ಮುಖ್ಯಮಂತ್ರಿಗಳು ಕ್ಷಮೆ ಯಾಚಿಸಬೇಕು ಎಂದರು. ಈ ವೇಳೆ ಸುನೀತಾ ಪುಟ್ಟಣ್ಣಯ್ಯ, ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಮಗ ವಿದೇಶದಲ್ಲಿ ಓದಿದ್ದಕ್ಕೆ ಅಮೆರಿಕಾದಲ್ಲಿ ದೊಡ್ಡ ಉದ್ಯಮಿ ಆಗಿದ್ದಾನೆ. ಕುಮಾರಸ್ವಾಮಿ ಮಗನೂ ವಿದ್ಯಾವಂತ ಆಗಿದ್ದರೆ ಆತನೂ ವಿದೇಶದಲ್ಲಿ ಒಳ್ಳೆಯ ಕೆಲಸದಲ್ಲಿರುತ್ತಿದ್ದ ಎಂದು ಗುಡುಗಿದರು.

ಜಿಲ್ಲೆಯಲ್ಲಿ ರೈತ ಸಂಘದ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿವೆ. ಈ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್-ಜೆಡಿಎಸ್, ಪುಟ್ಟಣ್ಣಯ್ಯ ಕುಟುಂಬದ ಬೆಂಬಲ ಕೋರಲು ಮುಂದಾಗಿದೆ. ಒಂದು ಹೆಜ್ಜೆ ಮುಂದೆ ಹೋಗಿರುವ ಕಾಂಗ್ರೆಸ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ ನೀಡಿ, ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ ನೀವು ಈ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡರಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದೆ. ಆದರೆ ಇಂದು ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಯಾರಿಗೂ ಬೆಂಬಲ ನೀಡದೆ, ತಟಸ್ಥವಾಗಿರಲು ರೈತ ಸಂಘ ತೀರ್ಮಾನಿಸಿದೆ

Translate »