ಬಿಜೆಪಿ ಬೆಂಬಲಿಸಲು ಬಿಎಸ್‍ವೈ ಅಭಿವೃದ್ಧಿ ಬಳಗ ಮನವಿ
ಚಾಮರಾಜನಗರ

ಬಿಜೆಪಿ ಬೆಂಬಲಿಸಲು ಬಿಎಸ್‍ವೈ ಅಭಿವೃದ್ಧಿ ಬಳಗ ಮನವಿ

May 6, 2018

ಚಾಮರಾಜನಗರ:  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮನವಿ ಮಾಡಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ರೈತರಿಗೆ ಅನೇಕ ಉಪಯುಕ್ತವಾದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮಹಿಳೆಯರಿಗೆ, ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಿದ್ದಾರೆ. ಎಲ್ಲಾ ವರ್ಗದ ಜನರಿಗೂ ಒಂದಲ್ಲ ಒಂದು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಅನುಕೂಲ ಕಲ್ಪಿಸಿದ್ದಾರೆ. ಹೀಗಾಗಿ ಇದೇ ತಿಂಗಳ 12 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ ಎಂದು ಪಕ್ಷದ ಮುಖಂಡರು, ಕಾರ್ಯಕರ್ತರು ಬೇಸರ ಮಾಡಿಕೊಳ್ಳಬಾರದು ಎಂದು ಇಂದುಶೇಖರ್ ಮನವಿ ಮಾಡಿದರು.

ಅಭಿಮಾನಿ ಬಳಗದ ವೇಣುಗೋಪಾಲ್. ಸಿ.ಡಿ.ಪ್ರಕಾಶ್, ಕೂಸಣ್ಣ, ಆರ್.ಗಿರೀಶ್, ಮಹೇಶ್ ಕುಮಾರ್, ಎಂ.ಎಸ್.ಮೋಹನ್, ಜಗದೀಶ್ ಸುದ್ದಿಗೋಷ್ಟಿಯಲ್ಲಿ ಹಾಜರಿದ್ದರು.

Translate »