ಭಾರತ್ ಬಂದ್‍ಗೆ ತಾಲೂಕು ಕೇಂದ್ರಗಳಲ್ಲಿ ಬೆಂಬಲ
ಚಾಮರಾಜನಗರ

ಭಾರತ್ ಬಂದ್‍ಗೆ ತಾಲೂಕು ಕೇಂದ್ರಗಳಲ್ಲಿ ಬೆಂಬಲ

September 11, 2018

ಚಾಮರಾಜನಗರ:  ಭಾರತ್ ಬಂದ್‍ಗೆ ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ, ಹನೂರು ಸೇರಿದಂತೆ ಇತರೆಡೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಎಸ್‍ಡಿಪಿಐ ಹಾಗೂ ಬಿಎಸ್‍ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗುಂಡ್ಲುಪೇಟೆ ವರದಿ:ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮತ್ತು ಎಡಪಕ್ಷಗಳು ಕರೆದಿದ್ದ ಭಾರತ್ ಬಂದ್‍ಗೆ ಪಟ್ಟಣ ಮತ್ತು ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಅಂಗಡಿ-ಮುಂಗಟ್ಟು, ಸಾರಿಗೆ ಬಸ್, ಆಟೋ, ಟೆಂಪೆÇೀ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರಮೋದಿ ವಿರುದ್ಧ ಘೋಷಣೆ ಕೂಗಿದರು.

ಗುಂಡ್ಲುಪೇಟೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಬಸ್‍ಗಳಿಲ್ಲದೆ ಬಿಕೋ ಎನ್ನುತ್ತಿರುವುದು.

ಬಸ್ ಸಂಚಾರ ಸಂಪೂರ್ಣ ಸ್ಥಗಿತ: ಗ್ರಾಮಾಂತರ ಪ್ರದೇಶಗಳಿಂದ ಪಟ್ಟಣಕ್ಕೆ ಬಂದ ಎಲ್ಲಾ ಬಸ್‍ಗಳನ್ನು ಡಿಪೆÇೀ ಒಳಗೆ ಕಳುಸಲಾಯಿತು. ಇದರಿಂದ ಪ್ರಯಾಣಿಕರು ಬೇರೆಡೆ ತೆರಳಲು ಸಾರಿಗೆ ಸೌಲಭ್ಯವಿಲ್ಲದೇ ಪರದಾಡಿದರು. ಸ್ವಂತ ಬೈಕ್ ಹೊಂದಿರುವವರು ತಮ್ಮ ವಾಹನಗಳಿಗೆ ಪೆಟ್ರೋಲ್ ತುಂಬಿಸಲು ಬಂಕ್ ಮುಂದೆ ಸಾಲುಗಟ್ಟಿ ನಿಂತಿದ್ದರು.

ಮಾತಿನ ಚಕಮಕಿ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪುರಸಭೆ ಸದಸ್ಯ ಗೋವಿಂದರಾಜನ್ ಅವರ ಮಾಲೀಕತ್ವದ ಬಂಕ್ ಮುಚ್ಚಿಸಲು ಮುಂದಾದರು ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೆÇಲೀಸರು ಮಧ್ಯ ಪ್ರವೇಶಿಸಿ ವಾಹನಗಳಿಗೆ ಡಿಸೇಲ್ ಮತ್ತು ಪೆಟ್ರೋಲ್ ಹಾಕಲಾಯಿತು. ಬಿಜೆಪಿ ಯುವ ಮೊರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ಬಂಕ್ ಮಾಲೀಕ ಗೋವಿಂದರಾಜನ್, ಮುಖಂಡ ಕಣ್ಣನ್, ಸಿಬ್ಬಂದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸಿ ಪೆಟ್ರೋಲ್ ಹಾಕಿ ಗಮನ ಸೆಳೆದರು.

ಮೋದಿ ಅಭಿಮಾನಿಗಳ ಅಂಗಡಿ ಬಂದ್ ಆಗಲಿಲ್ಲ: ಬಂದ್ ಯಶಸ್ವಿಗೊಳಿಸಲು ಕಾಂಗ್ರೆಸ್ ಮುಖಂಡರು ಬಾಗಿಲು ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರೆ ಬಿಜೆಪಿ ಕಾರ್ಯಕರ್ತರು ಸರತಿ ಸಾಲಿನಲ್ಲಿ ನಿಂತಿದ್ದ ಬೈಕ್‍ಗಳಿಗೆ ಪೆಟ್ರೋಲ್ ಹಾಕಿಸುವ ಮೂಲಕ ತಿರುಗೇಟು ನೀಡಿದರು. ಆದರೆ, ಮೋದಿ ಅಭಿಮಾನಿಗಳು ತಮ್ಮ ಅಂಗಡಿಗಳ ಬಾಗಿಲು ತೆರೆದು ವ್ಯಾಪಾರ ಮಾಡುವುದು ಅಲ್ಲಲ್ಲಿ ಕಂಡುಬಂದಿತು. ಅವರಿಗೆ ಬಿಜೆಪಿ ಕಾರ್ಯಕರ್ತರು ಗುಲಾಬಿ ನೀಡಿ ಅಭಿನಂದಿಸಿದರು.
ಕೊಳ್ಳೇಗಾಲ ವರದಿ(ನಾಗೇಂದ್ರ): ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರೆ ನೀಡಿರುವ ಭಾರತ್ ಬಂದ್‍ಗೆ ಕೊಳ್ಳೇಗಾಲದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‍ಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವಿವಿಧ ಪ್ರಗತಿ ಪರ ಸಂಘಟನೆಗಳ ಒಕ್ಕೂಟ ಬೆಂಬಲ ಸೂಚಿಸಿತ್ತು. ಇದರಿಂದ ಬಂದ್ ನಗರದಲ್ಲಿ ಸಂಪೂರ್ಣ ಯಶಸ್ವಿಯಾಯಿತು.

ಪಟ್ಟಣದ ಚಿತ್ರಮಂದಿರ ಮಾಲೀಕರು, ವರ್ತಕರ, ಸಂಘಟನೆಗಳು, ಬಹುತೇಕ ವ್ಯಾಪಾರಿಗಳು ಬೆಂಬಲ ನೀಡಿ ಬೆಳಿಗ್ಗೆಯಿಂದಲ್ಲೇ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುವ ವಾತಾವರಣ ಉಂಟಾಯಿತು. ರಾಜ್ಯ ಸಾರಿಗೆ ಇಲಾಖೆಯ ಬಸ್‍ಗಳು ಇಂದು ರಸ್ತೆಗಿಳಿಯಲಿಲ್ಲ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಸ್.ಜಯಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರಾದ ಚಿನ್ನಸ್ವಾಮಿ ಮಾಳಿಗೆ, ಶಾಂತರಾಜು ಇದ್ದರು.

ಹನೂರು, ವರದಿ: ತೈಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಕರೆ ನೀಡಿದ್ದ ಭಾರತ್ ಬಂದ್‍ಗೆ ಹನೂರು ತಾಲೂಕಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.ಶಾಲೆ ಕಾಲೇಜುಗಳು ಸೇರಿದಂತೆ ಹೋಟೆಲ್, ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಖಾಸಗಿ ಹಾಗೂ ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಜನ ಸಂದಣಿಯಿಂದ ಕೂಡಿದ್ದ ಪಟ್ಟಣ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಣಗುಡುತ್ತಿದ್ದು ಕಂಡು ಬಂದಿತು.

ಶಾಸಕ ಆರ್.ನರೇಂದ್ರ ನೇತೃತ್ವದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿದರು. ಬಳಿಕ ನಿಲ್ದಾಣದಲ್ಲಿ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಂದ್ ಹಿನ್ನಲೆ ಪಟ್ಟಣದ ಕೆಲವು ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತರಾಗಿ ಮುಚ್ಚುವ ಮೂಲಕ ಬೆಂಬಲ ವ್ಯಕ್ತಪಡಿಸಿದರೆ ಇನ್ನು ಕೆಲವು ಅಂಗಡಿಗಳು ಎಂದಿನಂತೆ ಅಂಗಡಿಗಳನ್ನು ತೆರೆದಿದ್ದವು.

ಹನೂರಿನಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಅಡುಗೆ ಅನಿಲವಿಟ್ಟು ಪ್ರತಿಭಟನೆ ನಡೆಸಿದರು.

ತಾಲೂಕಿನ ಮಾರ್ಟಳ್ಳಿಯಲ್ಲಿ ಬಂದ್ ಹಿನ್ನೆಲೆ ಗ್ರಾಮಸ್ಥರು ಮುಖ್ಯ ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಪ್ರತಿಭಟನೆ ನಡೆಸಿದರು. ಕೌದಳ್ಳಿ ಗ್ರಾಮದ ವೃತ್ತದಲ್ಲಿ ಕಾಂಗ್ರೆಸ್ ಹಾಗೂ ಎಸ್‍ಡಿಪಿಐ ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸದರು. ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಇಟ್ಟು ಮಾನವ ಸರಪಳಿ ರಚಿಸಿ ದಾರಿಯುದ್ದಕ್ಕೂ ಪ್ರಧಾನಿ ನರೇಂದ್ರಿ ಮೋದಿ ವಿರುದ್ಧ ಘೋಷಣೆ ಕೂಗಿದರು.

ಸಂತೇಮರಹಳ್ಳಿ, ವರದಿ: ಸಂತೇಮರಹಳ್ಳಿ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಎನ್ ನಟರಾಜು ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ಆಡಳಿತ ವೈಖರಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶÀ ವ್ಯಕ್ತಪಡಿಸಿದರು. ಅಂಗಡಿ ಮುಂಗಟ್ಟುಗಳು, ಪೆಟ್ರೋಲ್ ಬಂಕ್, ಸರ್ಕಾರಿ ಹಾಗೂ ಖಾಸಗಿ ಕಚೆÉೀರಿಗಳನ್ನು ಬಂದ್ ಆಗಿದವು.
ಪ್ರತಿಭಟನೆಯಲ್ಲಿ ಕಿಟ್ಟಪ್ಪ, ಸಿದ್ದಲಿಂಗಸ್ವಾಮಿ, ಗ್ರಾಪಂ ಸದಸ್ಯರಾದ ಡಿ.ಪಿ.ರಾಜು, ಗುರುಪ್ರಸಾದ್, ಎಪಿಎಂಸಿ ಸದಸ್ಯರಾದ ಶಂಕರ್‍ಮೂರ್ತಿ, ಮಹದೇವಪ್ರಸಾದ್, ಕಾವುದವಾಡಿ ಶಶಿ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು, ಮುಖಂಡರಾದ ಜಯಶಂಕರ್, ಲೋಕೇಶ್, ಬೂದಂಬಳ್ಳಿ ಶಂಕರ್, ಶ್ರೀಕಂಠಮೂರ್ತಿ, ಟಿ.ಮಹದೇವಸ್ವಾಮಿ, ರಾಜು, ಜ.ಹೊಸೂರು ಸೋಮಶೇಖರ್ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.


ಕೊಳ್ಳೇಗಾಲದ ಬಿಎಸ್‍ಎನ್‍ಲ್ ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

ಆಟೋಗಳು ಇಲ್ಲದೆ ಗರ್ಭಿಣಿಯರು, ರೋಗಿಗಳು ಪರದಾಟ!
ಯಳಂದೂರು:  ಭಾರತ್ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಾರಿಗೆ ಸೌಲಭ್ಯ ಸಂಪೂರ್ಣ ಸ್ಥಗಿತವಾಗಿತ್ತು. ಇದರಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿಯರು, ಬಾಣಂತಿಯರು, ವಯೋವೃದ್ಧರು ಸೇರಿದಂತೆ ರೋಗಿಗಳು ಚಿಕಿತ್ಸೆ ಪಡೆದು ಸ್ವ ಗ್ರಾಮಗಳಿಗೆ ತೆರಳು ಪರದಾಡುವಂತಾಯಿತು.

ಆಟೋ, ಬಸ್ ಸೌಲಭ್ಯವಿಲ್ಲದೆ ಗರ್ಭಿಣಿಯರು, ರೋಗಿಗಳು ಬಿಸಿಲಿನಲ್ಲಿ ನಡೆದುಕೊಂಡು ತಮ್ಮ ಸ್ವ ಗ್ರಾಮಗಳಿಗೆ ತೆರಳಿದ ಪ್ರಸಂಗಗಳು ನಡೆಯಿತು. ಒಟ್ಟಾರೆ ಭಾರತ್ ಬಂದ್ ಪಟ್ಟಣದಲ್ಲಿ ಯಶಸ್ವಿಯಾದರೆ, ಸಾರ್ವಜನಿಕರು ಪರದಾಡಿದರು.
ಕೇಂದ್ರದ ವಿರುದ್ಧ ಪ್ರತಿಭಟನೆ: ಪಟ್ಟಣದಲ್ಲಿ ಬೆಳಿಗ್ಗೆಯಿಂದಲ್ಲೇ ಪಟ್ಟಣದ ಎಲ್ಲಾ ಅಂಗಡಿಗಳು, ಜವಳಿ ವ್ಯಾಪಾರಿಗಳು, ರಸ್ತೆ ಬದಿ ವ್ಯಾಪರಿಗಳು, ಹೊಟೇಲ್ ಮಾಲೀಕರು, ಆಟೋ, ಕಾರು ಚಾಲಕರು ಬಂದ್‍ಗೆ ಸಹಕಾರ ನೀಡಿದರು.

ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಅಧ್ಯಕ್ಷತೆಯಲ್ಲಿ ಪಟ್ಟಣದ ನಾಡಮೇಗಲಮ್ಮ ದೇವಾಲಯದ ಬಳಿ ಸೇರಿದ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರಮೋದಿ ಅವರು ವಿರುದ್ಧ ಘೋಷಣೆ ಕೂಗಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ, ಗಾಂಧಿ ಸರ್ಕಲ್, ಎಸ್‍ಬಿಐ ಬ್ಯಾಂಕ್ ಬಳಿ ಮಾನವ ಸರಪಳಿ ನಿರ್ಮಿಸಲಾಯಿತು.
ಪ್ರತಿಭಟನೆಯಲ್ಲಿ ಸಂಸದ ಆರ್. ಧ್ರುವನಾರಾಯಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಜೆ.ಯೋಗೇಶ್, ಸದಸ್ಯೆ ಉಮಾವತಿ, ತಾಪಂ ಅಧ್ಯಕ್ಷ ನಿರಂಜನ್, ಸದಸ್ಯ ವೆಂಕಟೇಶ್, ಟೌನ್ ಪಂಚಾಯಿತಿ ಅಧ್ಯಕ್ಷ ನಿಂಗಣ್ಣ, ಸದಸ್ಯ ಮುಜೀಭ್, ಗ್ರಾಪಂ ಅಧ್ಯಕ್ಷ ಸಿ.ಸಿದ್ದನಾಯಕ, ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಸ್.ಬಾಲರಾಜು, ಜಯಣ್ಣ, ಮುಖಂಡರಾದ ಡಿ.ಎನ್.ನಟರಾಜು, ಕಿನಕಹಳ್ಳಿ ಬಿ.ರಾಚಯ್ಯ, ಗೋವಿಂದ, ಯರಿಯೂರು ಪ್ರಕಾಶ್, ಕೃಷ್ಣಾಪುರ ದೇವರಾಜು, ಜಯರಾಮು, ದೂಡ್ಡಯ್ಯ, ಶಿವರಾಮು, ರಾಮಚಂದ್ರ. ಮಹೇಶ್ ಪಾಲ್ಗೊಂಡಿದ್ದರು.

ಯಳಂದೂರಿನ ನಾಡಮೇಗಲಮ್ಮ ದೇವಾಲಯದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

Translate »