ಜೆಡಿಎಸ್-ಬಿಎಸ್‍ಪಿ ಬೆಂಬಲಿಸಲು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ನಿರ್ಧಾರ
ಮೈಸೂರು

ಜೆಡಿಎಸ್-ಬಿಎಸ್‍ಪಿ ಬೆಂಬಲಿಸಲು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ನಿರ್ಧಾರ

May 3, 2018

ಮೈಸೂರು:  ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಹಾಗೂ ಮೃದು ಕೋಮುವಾದಿ ಕಾಂಗ್ರೆಸ್ ತಿರಸ್ಕರಿಸಿ ಜೆಡಿಎಸ್ ಮತ್ತು ಬಿಎಸ್‍ಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿಯ ಉಪಾಧ್ಯಕ್ಷ ಡಾ.ಎನ್.ಮೂರ್ತಿ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್‍ಪಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಮಾದಿಗ ಸಂಘಟನೆಗಳ ಒಕ್ಕೂಟ, ಆದಿ ಜಾಂಬವ ಸಂಘಟನೆಗಳು ಸೇರಿದಂತೆ 200ಕ್ಕೂ ಹೆಚ್ಚು ದಲಿತಪರ, ಪ್ರಗತಿಪರ ಸಂಘಟನೆಗಳ ಸಂಯುಕ್ತಾ ಶ್ರಯದಲ್ಲಿ ರಚಿಸಲಾದ ನ್ಯಾಯಮೂರ್ತಿ ಎ.ಜೆ.ಸದಾ ಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ವತಿಯಿಂದ ಜೆಡಿಎಸ್ ಮತ್ತು ಬಿಎಸ್‍ಪಿ ಅಭ್ಯರ್ಥಿ ಗಳನ್ನು ಬೆಂಬಲಿಸಲು ನಿರ್ಣಯಿಸಲಾಗಿದೆ ಎಂದು ಹೇಳಿದರು.

ಸದಾಶಿವ ಆಯೋಗ ವರದಿ ಜಾರಿಗೆ ಕೇಂದ್ರ ಸರ್ಕಾ ರಕ್ಕೆ ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ತಾಳಿತು. ಕಾಂಗ್ರೆಸ್ ಮತ್ತು ಬಿಜೆಪಿ ಪರಿಶಿಷ್ಟರನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳುವುದಕ್ಕಷ್ಟೇ ಸೀಮಿತವಾಗಿವೆ. ಹೀಗಾಗಿ ಈ ಎರಡು ರಾಷ್ಟ್ರೀಯ ಪಕ್ಷಗಳನ್ನು ಈ ಬಾರಿ ಚುನಾವಣೆಯಲ್ಲಿ ಬಹುಜನರು ತಿರಸ್ಕರಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ 101 ಪರಿಶಿಷ್ಟ ಸಮು ದಾಯಗಳಲ್ಲಿ ಒಗ್ಗಟ್ಟು ಮೂಡಿಸಿ ಸದಾಶಿವ ಆಯೋ ಗದ ವರದಿ ಜಾರಿಗೆ ಪ್ರಾಮಾಣ ಕ ಪ್ರಯತ್ನ ಮಾಡು ವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಭರವಸೆ ನೀಡಿದ್ದಾರೆ. ಜೊತೆಗೆ ಪರಿಶಿಷ್ಟರಲ್ಲಿ ಒಬ್ಬರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಒಬ್ಬರು ಸೇರಿ ಇಬ್ಬರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಹುಜನರು ಜೆಡಿಎಸ್‍ನ 204 ಅಭ್ಯರ್ಥಿಗಳು ಹಾಗೂ ಬಿಎಸ್‍ಪಿಯ 20 ಅಭ್ಯರ್ಥಿ ಗಳಿಗೆ ತಮ್ಮ ಬೆಂಬಲ ನೀಡಬೇಕು ಎಂದು ಕೋರಿದರು.

ಶ್ವೇತಪತ್ರ ಹೊರಡಿಸಿ: ಸಿದ್ದರಾಮಯ್ಯ ಆಡಳಿತಾ ವಧಿಯಲ್ಲಿ ರಾಜ್ಯದಲ್ಲಿ ಸುಮಾರು ಮೂರೂವರೆ ಸಾವಿರ ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಸಿದ್ದರಾಮಯ್ಯನವರ ಸರ್ಕಾರ ಪರಿಶಿಷ್ಟರ ಅಭಿ ವೃದ್ಧಿಗೆ 4 ವರ್ಷಗಳಲ್ಲಿ 87 ಸಾವಿರ ಕೋಟಿ ರೂ. ಹಣ ನೀಡಿರುವುದಾಗಿ ಸುಳ್ಳು ಹೇಳಿ ಮುಗ್ಧ ದಲಿತ ಸಮು ದಾಯವನ್ನು ನಂಬಿಸುವ ಪ್ರಯತ್ನ ಮಾಡಿದ್ದಾರೆ. ಈ 87 ಸಾವಿರ ಕೋಟಿ ರೂ. ಹಣದಲ್ಲಿ ಶೇ.60ರಷ್ಟು ಹಣ ಇನ್ನಿತರೆ ಯೋಜನೆಗೆ ಬಳಸಿಕೊಳ್ಳಲಾಗಿದ್ದು, ಈ ಸಂಬಂಧ ಶ್ವೇತಪತ್ರ ಹೊರಡಿಸಿ ಆ ಬಳಿಕ ದಲಿತ ಸಮು ದಾಯದ ಮತ ಕೇಳಲಿ ಎಂದು ಸವಾಲು ಹಾಕಿದರು.

ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿರುವ ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾಯ್ದೆಯಲ್ಲಿನ ಕ್ಲಾಸ್ 7ಡಿ ಅನ್ನು ತೆಗೆದು ಹಾಕದೇ ರಾಜಕೀಯ ಗಿಮಿಕ್ ಮಾಡಿ ಐದು ವರ್ಷದ ಅವಧಿಯನ್ನು ಕಾಂಗ್ರೆಸ್ ಸರ್ಕಾರ ಮುಗಿಸಿದೆ. ಈ ಕಾಯ್ದೆಯ ಕ್ಲಾಸ್ 7ಡಿ ಅವಕಾಶ ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಇದ್ದ ಸಹಸ್ರಾರು ಹಣವನ್ನು ರಸ್ತೆ ಕಾಮ ಗಾರಿ ಸೇರಿದಂತೆ ಹಲವು ಯೋಜನೆಗಳಿಗೆ ಬಳಸಿಕೊಂಡು ದಲಿತ ಸಮುದಾಯಕ್ಕೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ತಿರಸ್ಕರಿಸು ವಂತೆ ಬಹು ಜನರಲ್ಲಿ ಮತ ಜಾಗೃತಿ ಮೂಡಿಸುವ ಅಭಿಯಾನವನ್ನು ರಾಜ್ಯಾದ್ಯಂತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿಯ ನಿಯೋಗದಿಂದ ಕೈಗೆತ್ತಿಕೊಳ್ಳಲಾಗಿದೆ. ಏ.14ರಂದು ಅಭಿಯಾನ ಆರಂಭಗೊಂಡಿದ್ದು, ಮೇ 10ರವರೆಗೂ ಮುಂದುವರೆಯಲಿದೆ ಎಂದು ಹೇಳಿದರು. ಮುಖಂಡರಾದ ಮಂಜು, ಹೊನ್ನಯ್ಯ ಸುದ್ದಿಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

Translate »