ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಸೂಚನೆ
ಕೊಡಗು

ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಸೂಚನೆ

December 12, 2018

ಮಡಿಕೇರಿ: ರೈತರು ಮುಂಗಾರು ವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಜಿಪಂ ಅಧ್ಯಕ್ಷ ಬಿ.ಎ. ಹರೀಶ್ ನಿರ್ದೇಶನ ನೀಡಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂ ಗಣದಲ್ಲಿ ಮಂಗಳವಾರ ನಡೆದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಈಗಾಗಲೇ ಭತ್ತ ಖರೀದಿ ಸುವ ಸಂಬಂಧ ನೋಂದಣಿಗೆ ಅವಕಾಶ ಮಾಡಿದೆ. ಆದ್ದರಿಂದ ಕೂಡಲೇ ಭತ್ತ ಖರೀದಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಜಿಪಂ ಅಧ್ಯಕ್ಷರು ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಆಹಾರ ಇಲಾಖೆ ಉಪ ನಿರ್ದೇಶಕ ಸದಾಶಿವಯ್ಯ, ಭತ್ತ ಖರೀದಿ ಸಂಬಂಧಿಸಿದಂತೆ ಈಗಾ ಗಲೇ ನಗರದ ಎಪಿಎಂಸಿ ಮತ್ತು ಕೆಎಫ್ ಸಿಎಸ್‍ಸಿ, ಕುಶಾಲನಗರದ ಎಪಿಸಿಎಂಎಸ್ ಮತ್ತು ಗೋಣಿಕೊಪ್ಪದ ಆರ್‍ಎಂಸಿ. ಯಾರ್ಡ್ ಬಳಿಯ ಎಪಿಸಿಎಂಎಸ್‍ಗಳಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಆರಂ ಭವಾಗಿದೆ ಎಂದು ತಿಳಿಸಿದರು.

ಇದೇ ಡಿ.16 ರ ನಂತರ ಭತ್ತ ಖರೀದಿ ಆರಂಭವಾಗಲಿದೆ. ಸಾಮಾನ್ಯ ಭತ್ತಕ್ಕೆ 1750 ರೂ. ಬೆಂಬಲ ಬೆಲೆಯಡಿ ಭತ್ತ ಖರೀದಿಸ ಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ ಮಾತ ನಾಡಿ, ಇತ್ತೀಚಿನ ದಿನಗಳಲ್ಲಿ ಭತ್ತ ಬೆಳೆಯು ವುದು ಕಷ್ಟಸಾಧ್ಯವಾಗಿದೆ. ಅಂತದರಲ್ಲಿ ಬೆಳೆದಿರುವ ಭತ್ತವನ್ನು ಬೆಂಬಲ ಬೆಲೆ ಯಡಿ ಖರೀದಿ ಮಾಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಜಿಲ್ಲೆಯಲ್ಲಿ ಅತಿರ ಭತ್ತವನ್ನು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಖರೀದಿಗೆ ಮುಂದಾಗುತ್ತಿಲ್ಲ. ಹೀಗೆ ಆದರೆ ಹೇಗೆ ಎಂದು ಪ್ರಶ್ನಿಸಿದರು.

ಕೆಂಪು ಅಕ್ಕಿಯನ್ನು ಬಳಕೆ ಮಾಡು ವುದು ಕಡಿಮೆ. ಆದರೆ ಕೇರಳ ರಾಜ್ಯದಲ್ಲಿ ಬೇಡಿಕೆ ಇದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜು ಮಾಹಿತಿ ನೀಡಿದರು. ಆಹಾರ ಇಲಾಖೆಯಲ್ಲಿ ಕೆಂಪು ಭತ್ತ ಖರೀದಿ ಬಗ್ಗೆ ಪ್ರಸ್ತಾವವಿಲ್ಲ ಎಂದು ಆಹಾರ ಇಲಾಖೆ ಉಪ ನಿರ್ದೇಶಕರು ತಿಳಿಸಿದರು. ಹಾಗಾ ದರೆ ಕೆಂಪು ಅಕ್ಕಿ ಬೆಳೆದವರ ಗತಿಯೇನು ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ ಪ್ರಶ್ನಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿ ಯಲ್ಲೂ ವೈದ್ಯರು ಮತ್ತು ಶುಶ್ರೂಷಕರು ಕಾರ್ಯ ನಿರ್ವಹಿಸಬೇಕು. ಗೋಣಿಕೊಪ್ಪ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು ಇರು ವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಿ.ಕೆ. ಬೋಪಣ್ಣ ಗಮನ ಸೆಳೆದರು.

ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ ಸೂರ್ಲಬ್ಬಿ ಆಸ್ಪತ್ರೆಯ ಸಮಸ್ಯೆಯನ್ನು ಸರಿಪಡಿಸ ಬೇಕು. ಹಾಗೆಯೇ ಜಿಲ್ಲೆಯ ನಾನಾ ಕಡೆ ಗಳಲ್ಲಿ ಖಾಲಿ ಇರುವ ವೈದ್ಯರನ್ನು ನಿಯೋ ಜಿಸುವಂತೆ ಅವರು ತಿಳಿಸಿದರು.
ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರೋಜಮ್ಮ ಶನಿವಾರಸಂತೆ ಆಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನಿಯೋ ಜಿಸುವಂತೆ ಸಲಹೆ ಮಾಡಿದರು. ಚೇಲಾ ವರ ಮತ್ತು ಮಲ್ಲಹಳ್ಳಿ ಜಲಪಾತದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಸ್ಥಳೀಯ ಪ್ರತಿನಿಧಿಗಳು ಸೇರಿದಂತೆ ಅಲ್ಲಿಗೆ ತೆರಳಿ ಸಮಸ್ಯೆ ಬಗೆಹರಿಸಲು ದಿನಾಂಕ ನಿಗಧಿಪಡಿಸುವಂತೆ ಪ್ರವಾಸೋದ್ಯಮ ಇಲಾ ಖೆಗೆ ಸಲಹೆ ನೀಡಿದರು.

ಮಲ್ಲಹಳ್ಳಿ ಜಲಪಾತದ ಬಳಿ ತಾತ್ಕಾ ಲಿಕ ಶೆಡ್ ನಿರ್ಮಿಸಿಕೊಂಡಿದ್ದವರನ್ನು ತೆರವುಗೊಳಿಸಲಾಗಿದೆ. ಇದರಿಂದ ಪ್ರವಾ ಸಿಗರಿಗೆ ಕುಡಿಯುವ ನೀರು ಸಹ ಸಿಗದೆ ಗುಂಡಿಗೆ ತೆರಳಿ ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅತೃಪ್ತಿ ವ್ಯಕ್ತಪಡಿಸಿದರು.

ಚೇಲಾವರ ಮತ್ತು ಮಲ್ಲಹಳ್ಳಿ ಜಲ ಪಾತದಲ್ಲಿ ಈಗ ಆಗಿರುವ ಕಾಮಗಾರಿ ಸಂಬಂಧ ಸ್ಥಳ ಪರಿಶೀಲಿಸಿ ವರದಿ ನೀಡು ವಂತೆ ಪ್ರವಾಸೋದ್ಯಮ ಇಲಾಖೆ ಅಧಿ ಕಾರಿಗೆ ಜಿಪಂ ಸಿಇಓ ಕೆ.ಲಕ್ಷ್ಮಿಪ್ರಿಯ ನಿರ್ದೇಶನ ನೀಡಿದರು.

ಕೊಡಗು ಜಿಲ್ಲೆಗೆ ಕಳೆದ ಬಾರಿ ಇದೇ ಅವಧಿಯಲ್ಲಿ 30 ಸಾವಿರ ಪ್ರವಾಸಿಗರು ಆಗಮಿಸಿದ್ದರು. ಈ ಬಾರಿ ಕೇವಲ 10 ಸಾವಿರ ಪ್ರವಾಸಿಗರು ಮಾತ್ರ ಆಗಮಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಜಗನ್ನಾಥ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಹಲವು ಕೆರೆಗಳಿದ್ದು, ಅವು ಗಳ ಪುನಃಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು. ಕೆರೆಗಳ ಹೂಳು ತೆಗೆಯುವುದು, ಕೃಷಿ ಹೊಂಡ ನಿರ್ಮಾಣ ಮಾಡುವುದು, ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾ ಯಧನ ಕಲ್ಪಿಸುವುದು ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂ ಧಪಟ್ಟ ಇಲಾಖೆ ಅಧಿಕಾರಿಗಳಿಗೆ ಬಿ.ಎ. ಹರೀಶ್ ಸೂಚನೆ ನೀಡಿದರು. ಪ್ರಕೃತಿ ವಿಕೋಪದಡಿ ಶಾಲಾ ಕಟ್ಟಡ ಗಳ ದುರಸ್ತಿಗೆ 88 ಲಕ್ಷ ರೂ. ಬಿಡು ಗಡೆಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆ ಸಂಬಂಧ ಅತಿಥಿ ಉಪನ್ಯಾಸಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕುಶಾಲನಗರದ ಕನ್ನಡ ಭವನ ಕಾಮ ಗಾರಿಗೆ ಹೆಚ್ಚಿನ ಹಣ ಬಿಡುಗಡೆಯಾಗಿದೆ. ಆದರೂ ಉದ್ಘಾಟನೆಗೊಂಡಿಲ್ಲ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷರು ಅತೃಪ್ತಿ ವ್ಯಕ್ತಪಡಿಸಿದರು. ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ 120 ವರ್ಷ ಗಳ ಇತಿಹಾಸವಿದ್ದು, ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕಿದೆ ಎಂದರು.

ಜೇನು ಕೃಷಿ ಅಭಿವೃದ್ಧಿಪಡಿಸುವ ನಿಟ್ಟಿ ನಲ್ಲಿ ಅಧಿಕಾರಿಗಳು ಮುಂದಾಗಬೇಕು. ಮನೆಯ ಸುತ್ತಮುತ್ತ ಗಿಡಗಳನ್ನು ನೆಡಲು ಉಚಿತವಾಗಿ ಗಿಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ನೀಡುವಂತೆ ಜಿಪಂ ಅಧ್ಯಕ್ಷರು ತಿಳಿಸಿದರು. ಕಿರಣ್ ಕಾರ್ಯಪ್ಪ ಮಾತನಾಡಿ, ಕಾಳು ಮೆಣಸನ್ನು ಸಹಾಯಧನದಡಿ ಖರೀದಿ ಮಾಡುವಂತಾಗ ಬೇಕು ಎಂದು ಸಲಹೆ ಮಾಡಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇ ಶಕ ತಮ್ಮಯ್ಯ ಮಾತನಾಡಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ 172 ಜಾನುವಾರುಗಳು ಮೃತ ಪಟ್ಟಿವೆ. ಸುಮಾರು 31 ಲಕ್ಷ ರೂ. ವಿತರಿಸ ಲಾಗಿದೆ. 8 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು. ಗೋ ಶಾಲೆ ಯಲ್ಲಿ 4 ಜಾನುವಾರು ಇವೆ ಎಂದರು.

ಸಾಮಾಜಿಕ ಅರಣ್ಯ ವಿಭಾಗದಲ್ಲಿ ಉಚಿತ ವಾಗಿ ಸ್ಥಳೀಯರಿಗೆ ಬೇಕಿರುವ ಗಿಡಗಳನ್ನು ವಿತರಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹೇಳಿದರು.

ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ಮನೆ ನಿರ್ಮಾಣಕ್ಕಾಗಿ ಇದುವರೆಗೆ 14.35 ಕೋಟಿ ರೂ. ಬಿಡುಗಡೆಯಾಗಿದ್ದು, 4.7 ಲಕ್ಷ ರೂ. ಘಟಕ ವೆಚ್ಚದಲ್ಲಿ ಮನೆಗಳ ನಿರ್ಮಾಣ ಕಾರ್ಯವಾಗಿದೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಶಿವ ಕುಮಾರ್ ಮಾಹಿತಿ ನೀಡಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಅನಂತ ಕುಮಾರ್, ಸಿ.ಕೆ.ಜಾಫರ್ ಷರೀಫ್, ಅಂಬ ರೀಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Translate »