ಭಾರತ್ ಬಂದ್‍ಗೆ ಸಂಘಟನೆಗಳ ಬೆಂಬಲ
ಮಂಡ್ಯ

ಭಾರತ್ ಬಂದ್‍ಗೆ ಸಂಘಟನೆಗಳ ಬೆಂಬಲ

September 10, 2018

ಮಂಡ್ಯ:  ತೈಲಬೆಲೆ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಕರೆ ನೀಡಲಾಗಿರುವ ಭಾರತ್ ಬಂದ್‍ಗೆ ಮಂಡ್ಯದಲ್ಲಿ ಕಾಂಗ್ರೆಸ್, ಜೆಡಿಎಸ್, ಕೆಎಸ್‍ಆರ್‍ಟಿಸಿ, ಖಾಸಗಿ ಬಸ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.
ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದ್ದರೆ, ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬಸ್ ಸಂಚಾರ ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿವೆ.

ನಗರದ ಎಲ್ಲಾ ಚಿತ್ರಮಂದಿರಗಳು ಚಲನಚಿತ್ರ ಪ್ರದರ್ಶನ ರದ್ದುಪಡಿಸಲಿವೆ. ಬಸ್ ಸಂಚಾರ ಬಂದ್ ಆಗಲಿರುವುದ ರಿಂದ ಸುಗಮ ಸಂಚಾರದ ಮೇಲೆ ಪರಿ ಣಾಮ ಬೀರುವ ಸಾಧ್ಯತೆಗಳು ನಿಚ್ಚಳ ವಾಗಿದ್ದು, ದಿನನಿತ್ಯದ ವಹಿವಾಟಿನ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದ್ದು, ಅಂಗಡಿ-ಮುಂಗಟ್ಟುಗಳು ಬಂದ್ ಆಗಲಿವೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳು ಸಿಗುವುದು ಅನುಮಾನ. ಬ್ಯಾಂಕುಗಳು, ಸರ್ಕಾರಿ ಕಚೇರಿಗಳ ಕೆಲಸ- ಕಾರ್ಯಗಳಲ್ಲೂ ವ್ಯತ್ಯಯ ಉಂಟಾಗಲಿದೆ.

ಸೋಮವಾರದ ಬಂದ್ ಸುದ್ದಿ ತಿಳಿಯುತ್ತಿದ್ದಂತೆಯೇ ದೂರದ ಊರು ಗಳಿಗೆ ಹೋಗುವವರು ಭಾನುವಾರವೇ ಪ್ರಯಾಣ ಬೆಳೆಸಿದರು. ದಿನ ಬಳಕೆಗೆ ಅಗತ್ಯವಿರುವ ವಸ್ತುಗಳನ್ನು ಜನರು ಖರೀದಿಸಿಟ್ಟುಕೊಳ್ಳುತ್ತಿದ್ದರು. ಬ್ಯಾಂಕ್ ಎಟಿಎಂಗಳಲ್ಲೂ ಸೋಮವಾರ ಹಣ ಸಿಗುವ ಅನುಮಾನವಿದೆ. ಪೆಟ್ರೋಲ್ ಬಂಕ್‍ಗಳು ಬಂದ್ ಆಗಲಿರುವುದರಿಂದ ಪೆಟ್ರೋಲ್-ಡೀಸೆಲ್ ಜನರಿಗೆ ಸಿಗುವುದಿಲ್ಲ. ಅದಕ್ಕಾಗಿ ಬಂದ್ ಮುನ್ನಾ ದಿನವೇ ಬಹುತೇಕರು ವಾಹನಗಳಿಗೆ ಪೆಟ್ರೋಲ್ ತುಂಬಿಸಿಕೊಳ್ಳು ತ್ತಿದ್ದ ದೃಶ್ಯ ಕೂಡ ಕಂಡು ಬಂತು.

ಕಾಂಗ್ರೆಸ್‍ನಿಂದ ಪ್ರತಿಭಟನೆ: ಕಾಂಗ್ರೆಸ್ ಪಕ್ಷದಿಂದಲೂ ಬಂದ್‍ಗೆ ಸಂಪೂರ್ಣ ಬೆಂಬಲ ಘೋಷಿಸಲಾಗಿದೆ. ಸೋಮ ವಾರ ಬೆಳಗ್ಗೆ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತ ರಿಂದ ಪ್ರತಿಭಟನೆ ನಡೆಸಲು ನಿರ್ಧರಿಸ ಲಾಗಿದ್ದು, ಪ್ರತಿಭಟನೆ ನೇತೃತ್ವವನ್ನು ಮಾಜಿ ಸಚಿವ ಎನ್.ಚೆಲುವರಾಯ ಸ್ವಾಮಿ ವಹಿಸುವರು. ಕಾಂಗ್ರೆಸ್ ಕಚೇರಿ ಯಿಂದ ಸಂಜಯ ವೃತ್ತ ದವರೆಗೆ ಮೆರ ವಣಿಗೆ ನಡೆಸಲಾಗುವುದು. ಈ ವೇಳೆ ಅಂಗಡಿಗಳ ಬಾಗಿಲು ಮುಚ್ಚುವಂತೆ ಮಾಲೀಕ ರಲ್ಲಿ ಮನವಿ ಮಾಡಲಾ ಗುವುದು ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

ವಿವಿಧ ಸಂಘಟನೆಗಳ ಬೆಂಬಲ: ಕೇಂದ್ರ ಸರ್ಕಾರ ತೈಲದ ಬೆಲೆ ಏರಿಕೆ ಕಡಿತ ಗೊಳಿಸುವಂತೆ ಒತ್ತಾಯಿಸಿ ಕರೆ ನೀಡಿ ರುವ ಭಾರತ್ ಬಂದ್‍ಗೆ ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿ ಸಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಕನ್ನಡ ಸೇನೆ, ಕಸ್ತೂರಿ ಕನ್ನಡ ಜನಪರ ವೇದಿಕೆ, ಎಸ್ ಎಫ್‍ಐ, ಸಿಐಟಿಯು ಸೇರಿ ಹಲವು ಸಂಘ ಟನೆಗಳು ಬಂದ್‍ಗೆ ಬೆಂಬಲ ಸೂಚಿಸಿವೆ.

ಶಾಲಾ-ಕಾಲೇಜಿಗೆ ರಜೆ
ಭಾರತ್ ಬಂದ್ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಹಾಗೂ ಕಾನೂನು ಸುವ್ಯವಸ್ಥೆ, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಸೆ.10ರಂದು ಮಂಡ್ಯ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿವೇಚನಾ ರಜೆ ಘೋಷಿಸ ಲಾಗಿದೆ ಎಂದು ಮಂಡ್ಯ ಡಿಸಿ ಎನ್. ಮಂಜುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಬಿಗಿ ಬಂದೋಬಸ್ತ್
ಭಾರತ್ ಬಂದ್ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬಂದೋಬಸ್ತ್‍ಗಾಗಿ 4 ಡಿವೈಎಸ್ಪಿ, 10 ಸಿಪಿಐ ಹಾಗೂ ಪಿಐ, 18 ಸಬ್ ಇನ್ಸ್‍ಪೆಕ್ಟರ್, 82 ಎಎಸ್‍ಐ, 503 ಹೆಚ್‍ಸಿ/ಪಿಸಿ, 2ಕೆಎಸ್‍ಆರ್‍ಪಿ, 12 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಸೂಕ್ಷ್ಮ ಕೇಂದ್ರಗಳಲ್ಲಿ ಪಿಕೆಟಿಂಗ್ ಹಾಗೂ ಆಯಾಕಟ್ಟಿನ ಪ್ರದೇಶಗಳಲ್ಲಿ ವಿಶೇಷ ಹಾಗೂ ವಜ್ರ ಗಸ್ತು ವಾಹನಗಳು, ಹೈವೆ ಪೆಟ್ರೋಲಿಂಗ್ ವಾಹನಗಳು ಸೇರಿದಂತೆ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Translate »