ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ
ಮೈಸೂರು

ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ

October 28, 2018

ಮೈಸೂರು: ಸಂಕಷ್ಟದಲ್ಲಿರುವ ರೈತರು ಬೆಳೆದ ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಲು ವಿಧಾನಸೌಧದಲ್ಲಿ ರೈತರೊಂದಿಗೆ ಸಭೆ ನಡೆಸುತ್ತಿದ್ದೇನೆ ಹೊರತು, ಬೀಗ ಹಾಕಿ ಕೊಂಡು ಚುನಾವಣಾ ರಾಜಕೀಯ ಮಾಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಅಧಿಕಾರದಲ್ಲಿದ್ದಾಗ ಉಪಚುನಾವಣೆಗಳನ್ನು ನಡೆಸಿದ್ದರಲ್ಲಾ ಆಗ ಅವರೂ ವಿಧಾನಸೌಧ ಬಾಗಿಲು ಹಾಕಿ ರಾಜಕೀಯ ಮಾಡಿದ್ದರೇ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಭತ್ತ ಮತ್ತು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವ ಕುರಿತು ಸಾಧ್ಯಾಸಾಧ್ಯತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮೊನ್ನೆ ಸಭೆ ನಡೆಸಿ ಚರ್ಚಿಸಿದ್ದೇನೆ. ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿಸಬಹುದೇ ಎಂಬುದರ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.

Translate »