ಸರ್ಕಾರಿ ಶಾಲಾ ಕಟ್ಟಡಗಳಿಗೆ ಕಾಯಕಲ್ಪ: ಬಜೆಟ್‍ನಲ್ಲಿ ಹೆಚ್ಚು ಅನುದಾನ ಕೋರಿಕೆ
ಮೈಸೂರು

ಸರ್ಕಾರಿ ಶಾಲಾ ಕಟ್ಟಡಗಳಿಗೆ ಕಾಯಕಲ್ಪ: ಬಜೆಟ್‍ನಲ್ಲಿ ಹೆಚ್ಚು ಅನುದಾನ ಕೋರಿಕೆ

January 12, 2020

ಮೈಸೂರು, ಜ.11(ಪಿಎಂ)- ಸರ್ಕಾರಿ ಶಾಲಾ ಕಟ್ಟಡಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಈ ಬಾರಿ ಬಜೆಟ್‍ನಲ್ಲಿ ಸಾರ್ವ ಜನಿಕ ಶಿಕ್ಷಣ ಇಲಾಖೆಗೆ ಹೆಚ್ಚು ಅನು ದಾನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಲಿಚ್ಛಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಮೈಸೂರಿನ ಕೌಟಿಲ್ಯ ವಿದ್ಯಾಲಯದ ಆವರಣದಲ್ಲಿ ಶನಿವಾರ ಮಾಧ್ಯಮದವ ರಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 60 ಸಾವಿರ ಶಾಲಾ ಕಟ್ಟಡಗಳಿದ್ದು, ಈ ಪೈಕಿ ಹಲವು ಶಾಲಾ ಕಟ್ಟಡಗಳು 50 ವರ್ಷಗಳ ಹಿಂದೆ ನಿರ್ಮಾಣವಾಗಿವೆ. ಇದರಲ್ಲಿ ಅನೇಕ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಅವು ಗಳಲ್ಲಿ ಕೆಲವನ್ನು ನೆಲಸಮಗೊಳಿಸಿ, ಹೊಸ ದಾಗಿ ನಿರ್ಮಾಣ ಮಾಡಬೇಕಿದೆ. ಇನ್ನು ಉಳಿದವನ್ನು ದುರಸ್ತಿಪಡಿಸಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಗೆ ಹೆಚ್ಚು ಅನುದಾನ ನೀಡುವಂತೆ ಕೋರಲು ಉದ್ದೇಶಿಸ ಲಾಗಿದೆ ಎಂದು ವಿವರಿಸಿದರು.

ಬ್ಯಾಗ್ ಲೆಸ್ ಡೇ ಕಾರ್ಯಕ್ರಮ ಕುರಿ ತಂತೆ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಮಾದರಿಯೊಂದನ್ನು ಸಿದ್ಧಪಡಿಸಿ ಸಲ್ಲಿಸಿದೆ. ಇದು ಬಹುತೇಕ ಉತ್ತಮವಾಗಿದೆ ಎಂದು ಶಿಕ್ಷಣ ತಜ್ಞರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದರು.

ಅಮಾನತು: ಉಚ್ಛಾರಣೆಗೆ ತಡವರಿ ಸಿದ್ದ ವಿದ್ಯಾರ್ಥಿಯೊಬ್ಬನ ವೀಡಿಯೋ ವೈರಲ್ ಮಾಡಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಶಾಲಾ ಅವಧಿಯಲ್ಲಿ ಶಿಕ್ಷಕರು ಮೊಬೈಲ್ ಬಳಕೆ ಮಾಡದಂತೆ ಕ್ರಮ ವಹಿಸಲು ಸುತ್ತೋಲೆ ಹೊರ ಡಿಸಲಾಗಿದೆ. ಮಕ್ಕಳ ಕೊರತೆ ನಮಗೆ ಆಟದ ಸಂಗತಿ ಆಗಬಾರದು ಎಂದು ಅವರು ಅಭಿಪ್ರಾಯಪಟ್ಟರು.

ಬಿಸಿಯೂಟ ಸೇವಿಸಿ ಹೆಚ್.ಡಿ. ಕೋಟೆ ಆದರ್ಶ ಶಾಲೆಯ ಮಕ್ಕಳು ಅಸ್ವಸ್ಥಗೊಂಡಿದ್ದ ಪ್ರಕರಣದ ಕುರಿತು ಪ್ರತಿ ಕ್ರಿಯಿಸಿ, ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಮಧ್ಯಾಹ್ನದ ಊಟದ ಬಗ್ಗೆ ಅಡುಗೆ ಸಿಬ್ಬಂ ದಿಗೆ ಜಾಗೃತಿ ಮೂಡಿಸಬೇಕಿದೆ. ಈ  ಘಟನೆಯಿಂದ ಎಲ್ಲಾ ಶಾಲೆಗಳಲ್ಲೂ ಇದೇ ರೀತಿ ಆಗುತ್ತದೆಯಾ? ಎಂಬ ಭಾವನೆ ಮೂಡುತ್ತದೆ. ವಿಶ್ವಾಸ ಮೂಡಿ ಸುವ ಕೆಲಸ ಮಾಡಬೇಕು ಎಂದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

 

 

Translate »