ಮೈಸೂರು,ಡಿ.21- ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರ ದೆಂದು ಸುಪ್ರಿಂಕೋರ್ಟ್ ಅಭಿಪ್ರಾಯಿಸಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಪ್ರಜಾ ಪಾರ್ಟಿ(ರೈತಪರ್ವ) ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಶಿವಣ್ಣ ಹೇಳಿದ್ದಾರೆ. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸುಮಾರು 22 ದಿನಗಳಿಂದ ದೆಹಲಿಯಲ್ಲಿ ಅಹೋರಾತ್ರಿ ಮುಷ್ಕರ ನಡೆಸಲಾಗುತ್ತಿದೆ. ಅನ್ನದಾತರ ಹಕ್ಕನ್ನು ಕೇಂದ್ರ ಸರ್ಕಾರ ಮಾನ್ಯ ಮಾಡ ಬೇಕು. ಜನವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವ ಸಂವಿಧಾನಬದ್ಧವಾದ ಹಕ್ಕು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಇದೆ. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ರೈತರ ಹೋರಾಟವನ್ನು ಮೊಟಕುಗೊಳಿಸುವ ಪ್ರಯತ್ನ ಮಾಡಬಾರದು. ಪೆÇಲೀಸರ ಮೂಲಕವೂ ಅವರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸಲ್ಲದು ಎಂದು ನ್ಯಾಯಾಲಯ ಅಭಿಪ್ರಾಯಿಸಿದೆ. ಇದರಿಂದ ರೈತರ ನ್ಯಾಯಯುತ ಹೋರಾಟಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಬಿ.ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![ರೈತರ ಹೋರಾಟಕ್ಕೆ ‘ಸುಪ್ರೀಂ’ ಸಹಮತ ಸ್ವಾಗತಾರ್ಹ](https://mysurumithra.com/wp-content/uploads/2020/12/praja-party.jpg)