ನವದೆಹಲಿ, ನ. 11- ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯ ಕ್ತಿಕ ಬಾಂಡ್ ಮೇಲೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. 2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಅಷ್ಟು ಮಾತ್ರವಲ್ಲದೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ನೋಡಿಕೊಳ್ಳುವಂತೆ ಅದು ಪೆÇಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು. ಪ್ರಕರಣದಲ್ಲಿ ಗೋಸ್ವಾಮಿ ಹಾಗೂ ಇನ್ನಿಬ್ಬರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದ್ದರಿಂ ಮತ್ತು ಅದಕ್ಕಾಗಿ ಕೆಳನ್ಯಾಯಾಲಯಕ್ಕೆ ತೆರಳುವಂತೆ ಕೋರಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನಾನು ರಿಪಬ್ಲಿಕ್ ಟಿವಿಯನ್ನು ನೋಡುವುದಿಲ್ಲ. ಆದರೆ ಈ ಪ್ರಕರಣದಲ್ಲಿ ಸಾಂವಿಧಾನಿಕ ಕೋರ್ಟ್ ಮಧ್ಯೆ ಪ್ರವೇಶಿಸ ದಿದ್ದರೆ ನಿಸ್ಸಂಶಯವಾಗಿ ನಾವು ವಿನಾಶದ ಹಾದಿಯಲ್ಲಿ ಹೋಗುತ್ತಿದ್ದೇವೆ ಎಂದರ್ಥ ಎಂದು ನ್ಯಾಯಮೂರ್ತಿಗಳು ಹೇಳಿದರು. ಈ ದೇಶದ ಸಾಂವಿಧಾನಿಕ ಕೋರ್ಟ್ ಕಾನೂನನ್ನು ಜಾರಿಗೆ ತಂದು ಜನರ ವೈಯಕ್ತಿಕ ಸ್ವಾತಂತ್ರ್ಯವನ್ನು ಕಾಪಾಡದಿದ್ದರೆ ಬೇರೆ ಯಾರು ಕಾಪಾಡುತ್ತಾರೆ, ಒಂದು ರಾಜ್ಯ ವ್ಯಕ್ತಿಯೊಬ್ಬನನ್ನು ಗುರಿಯಾಗಿಟ್ಟುಕೊಂಡು ಈ ರೀತಿ ದಾಳಿ ನಡೆಸಿದರೆ ನಾವು ಬಲವಾದ ಸಂದೇಶ ರವಾನಿಸಬೇಕಾಗುತ್ತದೆ. ನಮ್ಮ ಸಂವಿಧಾನ ಅಸಾಧಾರಣ ಸ್ಥಿತಿಸ್ಥಾಪಕತ್ವವನ್ನು ಹೊಂದಿದೆ ಎಂದು ಕೋರ್ಟ್ ಮಹಾರಾಷ್ಟ್ರ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದೆ. ನಾವು ಅನೇಕ ಪ್ರಕರಣ ಗಳನ್ನು ನೋಡುತ್ತಿದ್ದೇವೆ, ಹೈಕೋರ್ಟ್‍ಗಳು ಜಾಮೀನು ನೀಡುವಲ್ಲಿ ವಿಫಲವಾಗುತ್ತವೆ, ಜನರ ವೈಯಕ್ತಿಕ ಸ್ವಾತಂತ್ರ್ಯ ಕಾಪಾಡುವಲ್ಲಿ ವಿಫಲವಾಗುತ್ತಿವೆ.ಅಭಿಪ್ರಾಯ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಮೇಲೆ ರಾಜ್ಯ ಸರ್ಕಾರಗಳು ವೈಯಕ್ತಿಕವಾಗಿ ದಾಳಿ ಮಾಡುವುದು ಕಳವಳಕಾರಿ ಸಂಗತಿ. ರಾಜ್ಯ ಸರ್ಕಾರಗಳು ಜನರ ವ್ಯಕ್ತಿಗತ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದರೆ ಜನರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂಕೋರ್ಟ್ ಇರುತ್ತದೆ.