ನವದೆಹಲಿ: ರಾಜ್ಯ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ವಿವಾದ ಇತ್ಯರ್ಥ ಪಡಿಸಲು ಕರ್ನಾಟಕ ಸರ್ಕಾರ ಜಾರಿ ಗೊಳಿಸಿದ್ದ ನೂತನ ಕಾಯ್ದೆಗೆ ಆರಂಭ ದಲ್ಲೇ ಕಾನೂನು ತೊಡಕು ಎದುರಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಫೆ.27 ರಂದು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ.ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಗೆ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ, ತಡೆಯಾಜ್ಞೆ ನೀಡಿದೆ.
ಬಡ್ತಿ ಮೀಸಲಾತಿ ಕಾಯ್ದೆ ಪ್ರಶ್ನಿಸಿ ಅರ್ಜಿದಾರರು ಈ ಹಿಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಅಂತಿಮ ಹಂತದ ಲ್ಲಿದೆ. ಆದರೆ, ಆ ಕುರಿತ ತೀರ್ಪು ಹೊರ ಬರುವ ಮುನ್ನವೇ ರಾಜ್ಯ ಸರ್ಕಾರ ನೂತನ ಕಾಯ್ದೆ ಜಾರಿಗೆ ತಂದಿರುವುದು ಸರಿಯಲ್ಲ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಲಾಗಿದೆ.
ಏನಿದು ಪ್ರಕರಣ?:ಮೀಸಲಾತಿ ಅಡಿ ಯಲ್ಲಿ ಬಡ್ತಿ ಪಡೆದಿರುವ ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರಿಗೆ ಸಾಂದರ್ಭಿಕ ಹಿರಿತನ ಒದಗಿಸಿಕೊಡುವ ಉದ್ದೇಶ ದಿಂದ ರಾಜ್ಯ ಸರ್ಕಾರ 2002ರಲ್ಲಿ ಸರ್ಕಾರಿ ನೌಕರರ ಮೀಸಲಾತಿ ಆಧಾರಿತ ಬಡ್ತಿ ನೌಕರರ ಜೇಷ್ಠತೆ ನಿರ್ಣಯ ಕಾಯ್ದೆ ರೂಪಿಸಿತ್ತು. ಈ ಕಾಯ್ದೆ ಯನ್ನು ಪ್ರಶ್ನಿಸಿ ಕೆಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿ ದ್ದರು. ಈ ವಿಚಾರಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 2006ರಲ್ಲಿ ಎಲ್ಲ ಅರ್ಜಿ ಗಳನ್ನು ಹೈಕೋರ್ಟ್ ಗಳಿಗೆ ಮರಳಿಸಿ, ಮರು ವಿಚಾರಣೆ ನಡೆಸುವಂತೆ ಸೂಚಿಸಿತ್ತು.
ಅದರಂತೆ, ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಜೇಷ್ಠತಾ ನಿರ್ಣ ಯವನ್ನು ಎತ್ತಿಹಿಡಿದಿತ್ತು. ಇದರ ವಿರುದ್ಧ ಪ್ರಶ್ನಿಸಿ ಬಿ.ಕೆ.ಪವಿತ್ರಾ ಎಂಬುವರು 2006ರಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು.
ಬಡ್ತಿ ಮೀಸಲಾತಿ ನಿಯಮ ಜಾರಿಗೊಳಿಸುವುದರಿಂದ ಶೇ.82 ರಷ್ಟು ನೌಕರರÀ ಜೇಷ್ಠತೆಗೆ ಅಡ್ಡಿಯುಂಟಾಗುತ್ತದೆ. ಸಾಮಾನ್ಯ ವರ್ಗದವರು ತಮ್ಮ 56 ನೇ ವಯಸ್ಸಿಗೆ 3ನೇ ಹಂತದ ಜೇಷ್ಠತೆ ಪಡೆ ದರೆ, ಬಡ್ತಿ ಮೀಸಲಾತಿ ಹೊಂದಿದವರು 45 ನೇ ವಯಸ್ಸಿಗೇ ಮೂರು ಇಲ್ಲವೇ ನಾಲ್ಕನೇ ಹಂತದ ಪದೋನ್ನತಿ ಪಡೆಯು ತ್ತಾರೆ. ಇದು ತಾರತಮ್ಯಕ್ಕೆ ಎಡೆ ಮಾಡಿ ಕೊಡುತ್ತದೆ ಎಂದು ಮೇಲ್ಮನವಿಯಲ್ಲಿ ಆಕ್ಷೇಪಿ ಸಲಾಗಿತ್ತು. ಇದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ 2017ರ ಫೆಬ್ರವರಿ ಯಲ್ಲಿ ರಾಜ್ಯ ಸರ್ಕಾರ 2002ರಲ್ಲಿ ರೂಪಿ ಸಿದ್ದ ಜೇಷ್ಠತೆ ನಿರ್ಣಯ ಕಾಯ್ದೆಯನ್ನು ರದ್ದುಗೊಳಿಸಿತ್ತು. ಜೊತೆಗೆ, ಮೂರು ತಿಂಗಳಲ್ಲಿ ಹೊಸ ಕಾಯ್ದೆ ರೂಪಿಸುವಂತೆ ಸೂಚಿಸಿತ್ತು. ಹೊಸ ನಿಯಮ ಜಾರಿಗೊಳಿಸುವವರೆಗೆ ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇದರನ್ವಯ ರಾಜ್ಯ ಸರ್ಕಾರ ಕೂಡ ಮುಚ್ಚಳಿಕೆ ಬರೆದುಕೊಟ್ಟಿತ್ತು.
ಆ ನಂತರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಬಡ್ತಿ ಮೀಸ ಲಾತಿ ಕಾಯ್ದೆಗೆ ತಿದ್ದುಪಡಿ ತಂದು ರಾಷ್ಟ್ರಪತಿಗಳ ಅಂಕಿತ ಪಡೆಯಲಾಗಿತ್ತು. ಆದರೆ ಜಾರಿ ಮಾಡಿರಲಿಲ್ಲ. ಹಾಲಿ ಸರ್ಕಾರ ತಿದ್ದುಪಡಿ ಕಾಯ್ದೆಗೆ ಸಂಪುಟ ಸಭೆಯ ಅನುಮೋದನೆ ಪಡೆದು ಫೆ.27ರಂದು ಜಾರಿಗೊಳಿಸಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ಅಡ್ಡಿಯಾಗುವುದಿಲ್ಲ ಎಂದು ಅಟಾರ್ನಿ ಜನರಲ್ ಮುಕುಲ್ ರೊಹ ಟಗಿ ಅವರೇ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು.