ಮೈಸೂರು,ಡಿ.1-ಸಕಾಲ ಯೋಜನೆ ಯಡಿ ಸಾರ್ವಜನಿಕರಿಂದ ಸ್ವೀಕೃತವಾಗಿ ಬಾಕಿಉಳಿದಿರುವ ಅರ್ಜಿಗಳನ್ನು ಮತ್ತು ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಹಾಗೂ ಸಾರ್ವಜನಿಕರಿಗೆ ಸಕಾಲ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಸಕಾಲ ಸಪ್ತಾಹ ಕಾರ್ಯಕ್ರಮಕ್ಕೆ ಪ್ರಾಥ ಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್‍ಕುಮಾರ್ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಧಾನ ಸೌಧದಲ್ಲಿ ಚಾಲನೆ ಮಾಡಿದರು.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ನಡೆಸಬೇಕು ಮತ್ತು ಸಕಾಲದ ಅನುಷ್ಠಾನದ ಬಗ್ಗೆ ಪರಿಶೀಲನೆ ಮಾಡ ಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಸಕಾಲ ಸಪ್ತಾಹ ಕಾರ್ಯಕ್ರಮ ದಿಂದ ಜನಸಾಮಾನ್ಯರಿಗೆ ಅನುಕೂಲವಾಗು ವಂತೆ ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯ ದರ್ಶಿಗಳು ಮತ್ತು ಎಲ್ಲಾ ಜಿಲ್ಲಾಧಿಕಾರಿ ಗಳು ಕೈಜೋಡಿಸಬೇಕು. ಪ್ರತಿಯೊಂದು ಇಲಾಖೆಯಲ್ಲೂ ಸಕಾಲ ಸಪ್ತಾಹದ ಬಗ್ಗೆ ಅರಿವು ಮೂಡಿಸಲು ಬ್ಯಾನರ್‍ಗಳನ್ನು ಕಟ್ಟಬೇಕು ಎಂದು ತಿಳಿಸಿದರು.
ಸಕಾಲ ಸಪ್ತಾಹ ಕಾರ್ಯಕ್ರಮವು ಮೊದಲ ಹಂತದಲ್ಲಿ ನವೆಂಬರ್ 30ರಿಂದ ಡಿಸೆಂ ಬರ್ 5ರವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯಲ್ಲಿ ನಡೆಯಲಿದೆ. 2ನೇ ಹಂತದಲ್ಲಿ ಡಿ.7ರಿಂದ ಡಿ.11ರವರೆಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯಲ್ಲಿ, 3ನೇ ಹಂತದಲ್ಲಿ ಡಿ.14ರಿಂದ ಡಿ.19ರವ ರೆಗೆ ಉಳಿದ ಎಲ್ಲಾ ಇಲಾಖೆಗಳಲ್ಲಿ ನಡೆಯ ಲಿದೆ. ಈ ಸಕಾಲದಲ್ಲಿ ಒಟ್ಟು1025 ಸೇವೆ ಗಳು ದೊರೆಯುತ್ತವೆ. ಈಗಾಗಲೇ 22,88, 81,652 ಅರ್ಜಿಗಳು ಬಂದಿದ್ದು, 22,82, 55,866 ಅರ್ಜಿಗಳು ವಿಲೇವಾರಿ ಆಗಿವೆ ಎಂದರು. ಸಕಾಲ ಅನುಷ್ಠಾನದಲ್ಲಿ ಮೊದಲ 3 ಸ್ಥಾನದಲ್ಲಿ ಮಂಡ್ಯ, ಚಿಕ್ಕಮಗಳೂರು ಹಾಗೂ ಚಿಕ್ಕಬಳ್ಳಾಪುರ ಇದ್ದು, ಕೊನೆಯ ಮೂರು ಸ್ಥಾನದಲ್ಲಿ ಬೆಂಗಳೂರು ನಗರ, ಬೀದರ್ ಮತ್ತು ರಾಯಚೂರು ಇದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್, ಸಕಾಲ ಮಿಷನ್ ಅಪರ ನಿರ್ದೇಶಕಿ ಡಾ.ಬಿ.ಆರ್. ಮಮತಾ, ಎಡಿಸಿ ಬಿ.ಎಸ್.ಮಂಜುನಾಥಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.