ವಿಮಾನ ನಿಲ್ದಾಣ, ಗಡಿ ಜಿಲ್ಲೆಗಳಲ್ಲಿ ಮತ್ತೆ ಕಣ್ಗಾವಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು
ಮೈಸೂರು

ವಿಮಾನ ನಿಲ್ದಾಣ, ಗಡಿ ಜಿಲ್ಲೆಗಳಲ್ಲಿ ಮತ್ತೆ ಕಣ್ಗಾವಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು

April 27, 2022

ನಾಲ್ಕನೇ ಅಲೆ ಭೀತಿ: ಮುಖ್ಯಮಂತ್ರಿಗಳೊAದಿಗೆ ಇಂದು ಮೋದಿ ಸಂವಾದ
ವಿಜಯಪುರ, ಏ.೨೬- ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೊನಾ ಪಾಸಿ ಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭೀತಿ ಆವರಿಸಿದೆ.

ಈ ಮಧ್ಯೆ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರು ಕೇಂದ್ರದ ಸಲಹೆಯನ್ನು ಆಧರಿಸಿ ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಮತ್ತು ಕಣ್ಗಾ ವಲು ಕ್ರಮಗಳನ್ನು ಮತ್ತೆ ಜಾರಿಗೊಳಿಸ ಬಹುದು ಎಂದು ಹೇಳಿದ್ದಾರೆ.

ಇದೇ ವೇಳೆ ಕೊರೊನಾ ಹರಡುವುದನ್ನು ತಡೆಯಲು ಜನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾ ಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾ ಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಎಂ ಮನವಿ ಮಾಡಿದರು. ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗದ ಕಾರಣ ಆತಂಕಪಡುವ ಅಗತ್ಯವಿಲ್ಲ. ಆದರೂ ನಾವು ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿ ದ್ದೇವೆ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ಹಿಂದಿನ ಮೂರು ಅಲೆಗಳ ಸಮಯದಲ್ಲಿ ನೆರೆಯ ಮಹಾರಾಷ್ಟç ಮತ್ತು ಕೇರಳದ ಜನರು ಕೋವಿಡ್ ಆತಂಕಕ್ಕೆ ಕಾರಣರಾಗಿದ್ದರು. ಆದ್ದರಿಂದ, ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊA ದಿಗೆ ಪ್ರಧಾನಿ ಮೋದಿ ಅವರ ಸಭೆಯ ನಂತರ ಕೇಂದ್ರದ ಸಲಹೆಯನ್ನು ಆಧರಿಸಿ, ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಗಡಿ ಜಿಲ್ಲೆಗಳಲ್ಲಿ ವಿಶೇಷವಾಗಿ ಮಹಾರಾಷ್ಟç ಮತ್ತು ಕೇರಳ ಗಡಿಯಲ್ಲಿ ಎಲ್ಲಾ ಮುನ್ನೆಚ್ಚ ರಿಕೆ ಮತ್ತು ಕಣ್ಗಾವಲು ಕ್ರಮಗಳನ್ನು ಮತ್ತೆ ಜಾರಿಗೊಳಿಸುತ್ತೇವೆ ಎಂದು ಹೇಳಿದರು.

ನಾಳೆ ಪ್ರಧಾನಮಂತ್ರಿ ಮೋದಿ ಅವರು ಕೋವಿಡ್ ಸ್ಥಿತಿಗತಿ ಬಗ್ಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬAಧಿಸಿದAತೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರಿಗೆ ವಿವರಿಸಲಾಗುವುದು ಎಂದು ಹೇಳಿದರು.

ಇತ್ತೀಚೆಗೆ ಎರಡು ದೇಶಗಳಲ್ಲಿ ಕೊರೊನಾ ಸಾಂಕ್ರಾಮಿಕ ಉಲ್ಬಣವಾಗಿದೆ. ಭಾರತದ ನೆರೆಯ ದೇಶಗಳಾದ ಥೈಲ್ಯಾಂಡ್, ಇಂಡೋನೇಷ್ಯಾ, ಚೈನಾ ದೇಶಗಳಲ್ಲಿಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಪ್ರಧಾನಮಂತ್ರಿಗಳು ಮುಂಜಾಗ್ರತೆ ವಹಿಸಿ ಎಲ್ಲ ಕ್ರಮ ಕೈಗೊಳ್ಳ ಬೇಕೆಂದು ಸೂಚಿಸಿದ್ದಾರೆ. ನಿನ್ನೆ ನಡೆದಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಕೆಲವು ಸೂಕ್ತ ನಡವಳಿಕೆಗಳನ್ನು ಪುನಃ ಜಾರಿಗೊಳಿಸಲು ಸೂಚಿಸಲಾಗಿದೆ. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಿದರೆ ಉತ್ತಮ. ಇದುವರೆಗೂ ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಆದರೂ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

Translate »