ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪೊಲೀಸರಿಗೆ ದೂರು
ಮೈಸೂರು

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪೊಲೀಸರಿಗೆ ದೂರು

May 28, 2018

ತಿ.ನರಸೀಪುರ:  ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಸ್ಟೇಟಸ್ ಮತ್ತು ಪೋಸ್ಟ್‍ಗಳನ್ನು ಹರಿಯಬಿಟ್ಟು ತಮ್ಮ ತೇಜೋವಧೆ ಮಾಡಿ, ಸೋಲಿಸಲು ಷಡ್ಯಂತ್ರ ರೂಪಿಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಎಸ್.ಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಮೈಸೂರು ನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಗೆ ತೆರಳಿ ಎಸ್ಪಿ ಅಮಿತ್‍ಸಿಂಗ್ ಅವರಿಗೆ ಲಿಖಿತ ದೂರನ್ನು ನೀಡಿರುವ ಎಸ್.ಶಂಕರ್, ಚುನಾವಣೆಯ ಮತದಾನ ಪೂರ್ವದಲ್ಲಿ ಕೆಲವು ಕಿಡಿಗೇಡಿಗಳು ಸೇರಿದಂತೆ ಮಲ್ಲಿಕಾರ್ಜುನಸ್ವಾಮಿ ಎಂಬಾತ ಆತನ ಮೊಬೈಲ್ ಸಂಖ್ಯೆ: 9008944417ಯಲ್ಲಿ ‘ಮನೆಹಾಳ್ ಶಂಕರ್ ಕಾಂಗ್ರೆಸ್ ಜೊತೆ ಒಳ ಒಪ್ಪಂದ 40 ಕೋಟಿ ಡೀಲ್, ಹುಡುಕಿಕೊಡಿ ಈ ಲೋಫರ್‍ನನ್ನು’. ಇಂತಹ ಕೆಟ್ಟ ಪದಗಳ ಮೂಲಕ ಮನಸ್ಸಿಗೆ ನೋವಾಗಿದ್ದು, ಇವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ. ದೂರನ್ನು ಸ್ವೀಕರಿಸಿದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಎಫ್‍ಐಆರ್ ದಾಖಲಿಸಿಕೊಂಡು ಮುಂದಿನ ತನಿಖೆಗೆ ಅಧೀನಾಧಿಕಾರಿಗಳಿಗೆ ಸೂಚನೆ ನೀಡಿದರು. ತನಿಖೆ ನಂತರ ತಪ್ಪಿತಸ್ಥ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದರು.

Translate »