ಅನುಮಾನಾಸ್ಪದವಾಗಿ ವ್ಯಕ್ತಿ ಸಾವು
ಹಾಸನ

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು

June 15, 2018

ಹಾಸನ: ನಗರದ ರಿಂಗ್ ರಸ್ತೆ ಬಳಿ ಇರುವ ಸುಪ್ರಿಯಾ ಬಾರ್ ಮುಂದೆ ವ್ಯಕ್ತಿ ಓರ್ವ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಸುಪ್ರಿಯಾ ಬಾರ್ ಮುಂದೆ ಕುಳಿತಿದ್ದ ಯತೀಶ್ ಎಂಬುವವರು ಸಾವನಪ್ಪಿದ್ದು, ರಾತ್ರಿ ಕಂಠಪೂರ್ತಿ ಕುಡಿದು ಹೃದಯಾಘಾತದಿಂದ ಸಾವನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿ ತಾಲೂಕಿನ ಬೂವನಹಳ್ಳಿ ನಿವಾಸಿ ಯತೀಶ್ (32) ಎಂದು ತಿಳಿದು ಬಂದಿದೆ. ವಿಷಯ ತಿಳಿದ ಬಡಾವಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Translate »